ಛತ್ರಪತಿ ಶಿವಾಜಿ ಮಹಾರಾಜರ 395 ಜಯಂತಿ ಆಚರಣೆ…!!!

ಛತ್ರಪತಿ ಶಿವಾಜಿ ಮಹಾರಾಜರ 395 ಜಯಂತಿ ಆಚರಣೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ನಾಡಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವ ಆಚರಿಸಲಾಯಿತು.
ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಹೊನ್ನೂರಪ್ಪ ಮಾತನಾಡಿ ಭಾರತವು ಪ್ರಾಚೀನಕಾಲದಿಂದಲೂ ಸಾಕಷ್ಟು ಧೈರ್ಯಶಾಲಿ ಪುರುಷರ ಮತ್ತು ವೀರ ಆಡಳಿತಗಾರರ ಹಿನ್ನೆಲೆಯನ್ನು ಹೊಂದಿದೆ. ಭಾರತದಲ್ಲಿ ಅತ್ಯಂತ ಧೈರ್ಯಶಾಲಿ ಪುರುಷರು ಮಾತ್ರವಲ್ಲ, ಕೆಲವೊಂದು ಮಹಿಳೆಯರು ಕೂಡ ಆಡಳಿತ ನಡೆಸಿದ ಇತಿಹಾಸವಿದೆ.
ಈ ಧೈರ್ಯಶಾಲಿ ಸಾಮ್ರಾಜ್ಯದ ಅಧಿಪತಿ ಗಳು ತಮ್ಮ ತಾಯಿನಾಡು ಮತ್ತು ರಾಜ್ಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಜಿಸಿದ್ದಾರೆ. ಅತ್ಯಂತ ಮಹಾನ್ ಧೈರ್ಯಶಾಲಿ ಯೋಧರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಕೂಡ ಒಬ್ಬರು ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ವೀರೇಶ್ ಕಿಟ್ಟಪ್ಪ ನವರ್. ಅಮಲಾಪುರದ ಅಂಜಿನಪ್ಪ. ನಡಲು ಮನೆ ತಿಪ್ಪೇಸ್ವಾಮಿ. ಫೋಟೋ ನಾಗರಾಜ್. ಹೇಮಂತ್. ಮಾರಪ್ಪ. ಮತ್ತು ನಾಡಕಚೇರಿ ಸಿಬ್ಬಂದಿಗಳಾದ ಮಂಜುನಾಥ್ .ಸಿದ್ದೇಶ್ .ಅನಿತಾ ಪೂಜಾರಿ. ಇತರರು ಉಪಸ್ಥಿತರಿದ್ದರು…

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend