ಸಚಿವ ಕೆ. ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಹಾಗೂ ತಕ್ಷಣವೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರತಿಭಟನೆ…!!!

ಸಚಿವ ಕೆ. ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಹಾಗೂ ತಕ್ಷಣವೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಂದು ಚಳ್ಳಕೆರೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರರ ಮೂಲಕ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಕಾಂಗ್ರೆಸ್ ಮುಖಂಡರು ಮಾತನಾಡಿ, ಕೆ. ಎಸ್. ಈಶ್ವರಪ್ಪ ಅವರು ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುವಂತ ಹೇಳಿಕೆ ನೀಡಿರುವುದು ಖಂಡನೀಯ. ಇದು ದೇಶದ್ರೋಹದ ಹೇಳಿಕೆಯಾಗಿದೆ. ಈ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶ್ರೀ ತಿಪ್ಪೇಸ್ವಾಮಿ, ಶ್ರೀ ಕಿರಣ್ ಶಂಕರ್, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮಾಜಿ ಸದಸ್ಯರು, ನಗರಸಭೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಮಹಿಳಾ ಕಾಂಗ್ರೆಸ್ ಘಟಕದವರು ಭಾಗವಹಿಸಿದ್ದರು…

ವರದಿ. ಚಕ್ರಿ ಬಸವರಾಜ್, ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend