ಹಿಂದೂ ಕಾರ್ಯಕರ್ತನ ಹತ್ಯೆ ಮತ್ತು ಕುರಿಗಾಯಿ ಅತ್ಯಾಚಾರ ಖಂಡಿಸಿ ತನಿಖೆಗೆ ಮುಖ್ಯಮಂತ್ರಿಗಳಿಗೆ ಮನವಿ
ಕಳೆದ ಸುಮಾರು ದಿನಗಳಿಂದ ದೇಶದಾದ್ದಂತ ಚರ್ಚಗೆ ಗ್ರಾಸವಾಗಿರುವ ಹಿಜಾಬ ಮತ್ತು ಕೇಸರಿ ಶಾಲು ವಿವಾದ ಸದ್ಯ ತಾರಕಕ್ಕೇರಿ ಕೋರ್ಟ್ ಮೆಟ್ಟಿಲುರೆರಿವುದು ಗಮನಿಸಿರಬಹುದು.
ಈ ಸಾರ್ವಜನಿಕ ಗೊಂದಲದ ನಡುವೆ ಫೆಬ್ರವರಿ ಇಪ್ಪತ್ತನೆಯ ತಾರಿಖು ರವಿವಾರ ರಾತ್ರಿ ಹಿಂದೂ ಯುವಕ ಬಜರಂಗದಳದ ಕಾರ್ಯಕರ್ತ ಶಿವಮೊಗ್ಗದ ಹರ್ಷನ ಮೇಲೆ ಹಲ್ಲೆಯಾಗಿ ಬರ್ಬರವಾಗಿ ಕೊಲೆಯಾಗಿದ್ದು ಮತ್ತಷ್ಟು ಗೊಂದಲ ಸೃಷ್ಟಿ ಮಾಡಿ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟುಮಾಡಿ ಮತ್ತು ರಾಜ್ಯದ ಉದ್ದಗಲಕ್ಕೂ ಹಲವು ಕಡೆಗಳಲ್ಲಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದರ ನಡುವೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಗುಪ್ಪಿಯಲ್ಲಿ ಬೆಳಗಾವಿ ಜಿಲ್ಲೆಯ ವಲಸೆ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರವಾಗಿದೆ ಎಂದು ಬೆಳಕಿಗೆ ಬಂದಿದೆ. ಕಾರಣ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಎರಡು ಪ್ರತ್ಯೇಕ ಕೃತ್ಯಗಳನ್ನು ಎಸಗಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಹಾಲಿಂಗಪುರದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಒತ್ತಾಯಿಸಿದರು ಒಂದುವೇಳೆ ಬಂಧಿಸದಿದ್ದಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಮಹಾಲಿಂಗಪುರ ಪುರಸಭೆಯ ಮುಖ್ಯಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು..

ವರದಿ.ಬಸವರಾಜ ನಂದೆಪ್ಪನವರ
ಮಹಾಲಿಂಗಪುರ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
