ಚಳ್ಳಕೆರೆ ನಗರದಲ್ಲಿ ಇಂದು ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು…!!!!

ಚಳ್ಳಕೆರೆ ನಗರದಲ್ಲಿ ಇಂದು ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.

ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ ಹಾಗೂ ಚಳ್ಳಕೆರೆ ಮತ್ತು ಚಿತ್ರದುರ್ಗ ಜಿಲ್ಲಾ ಡಿಜಿಟಲ್ ಸದಸ್ಯತ್ವ ಮುಖ್ಯಸ್ಥರು ಹಾಗೂ ಮಾಜಿ ರಾಜ್ಯಧ್ಯಕ್ಷರು ಕೆಪಿಸಿಸಿ ವೈದ್ಯಕೀಯ ಘಟಕದ ಸದಸ್ಯರಾದ ಡಾ.ರಾಘವೇಂದ್ರ, ಅಭಿಜಿತ್ ಬಿ.ಎಲ್.ಗೌಡ ನೇತೃತ್ವದಲ್ಲಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕೈ ಬಲಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ವತಿಯಿಂದ ಕಳೆದ ಕೆಲವು ದಿನಗಳಿಂದ ಚಳ್ಳಕೆರೆ ನಗರದಲ್ಲಿ ಹಮ್ಮಿಕೊಂಡಿರುವ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಒಳ್ಳೆಯ ಸ್ಪಂದನೆ ದೊರೆಯುತ್ತಿದ್ದು, ಈ ಕುರಿತಂತೆ ಚಳ್ಳಕೆರೆ ನಗರದ ಶಾಸಕರ ನಿವಾಸದ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.

ಈ ಮಹತ್ವದ ಸಭೆಯಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ, ನಗರ ಸಭಾ ಸದಸ್ಯರಾದ ಪ್ರಸನ್ನಕುಮಾರ್, ಚಿತ್ರದುರ್ಗ/ ಚಳ್ಳಕೆರೆ ಡಿಜಿಟಲ್ ಸದಸ್ಯತ್ವ ಮುಖ್ಯಸ್ಥರಾದ ಡಾ.ರಾಘವೇಂದ್ರ, ಅಭಿಜಿತ್ ಬಿ.ಎಲ್.ಗೌಡ, ಶಾಸಕರಾದ ಟಿ.ರಘುಮೂರ್ತಿ ಸಾಮಾಜಿಕ ಜಾಲತಾಣ ಮುಖ್ಯಸ್ಥರಾದ ಮಂಜುನಾಥ, ಪಕ್ಷದ ಹಲವು ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಚಕ್ರಿ ಬಸವರಾಜ್, ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend