ಶಿವಮೊಗ್ಗದ ಬಜರಂಗದಳದ ಸಹ ಸಂಯೋಜಕ ಹರ್ಷ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ…!!!

ಶಿವಮೊಗ್ಗದ ಬಜರಂಗದಳದ ಸಹ ಸಂಯೋಜಕ ಹರ್ಷ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ಕಾರ್ಯಕರ್ತರು ಬುಧವಾರ ನಗರದ ಪ್ರಮುಖ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಡಿ.ಎನ್.ಮಂಜುನಾಥ್ ಮಾತನಾಡಿ, ‘ಪಿಎಫ್‍ಐ- ಎಸ್‍ಡಿಪಿಐ ಸಂಘಟನೆಯ ಕಾರ್ಯಕರ್ತರು ಸಂಚುಮಾಡಿ ಹರ್ಷನ ಹತ್ಯೆ ಮಾಡಿದ್ದು, ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್, ಮುಖಂಡ ಕಾಲುವೆಹಳ್ಳಿ ಜಯಪಾಲಯ್ಯ ಮಾತನಾಡಿ, ಸಮಾಜದಲ್ಲಿ ಪದೇ ಪದೆ ಹತ್ಯೆ ಪ್ರಕರಣಗಳು ನಡೆಯುವುದನ್ನು ತಡೆಯಬೇಕು. ಹರ್ಷನ ಕುಟುಂಬಕ್ಕೆ ಕೂಡಲೇ ₹ 25 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಎನ್.ರಘುಮೂರ್ತಿ ಮನವಿ ಸ್ವೀಕರಿಸಿದರು. ಕಾರ್ಯಕರ್ತರಾದ ನಾಗರಾಜ, ವೆಂಕಟೇಶ, ಮಂಜುನಾಥ್, ಚೇತನಕುಮಾರ್, ಸುರೇಶ್, ಶಶಿಧರ, ಪ್ರಸಾದ್ ಇದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend