ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು – ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷೀದೇವಿ…!!!

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು – ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷೀದೇವಿ

ಸಿಂಧನೂರು : ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾ ಪಂಚಾಯತ ರಾಯಚೂರು, ತಾಲೂಕು ಪಂಚಾಯಿತಿ ಸಿಂಧನೂರ,ಗ್ರಾಮಪಂಚಾಯಿತಿ ಗಾಂಧಿನಗರ ಸಹಯೋಗದಲ್ಲಿ ಗಾಂಧಿನಗರದಲ್ಲಿ 23ಕ್ಕೂ ಹೆಚ್ಚು ಸ್ವಸಹಾಯ ಮಹಿಳಾ ಗುಂಪಿನ ಸದಸ್ಯರು ತಾವು ತಯಾರಿಸಿದ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕಾಗಿ ಮಾಸಿಕ ಸಂತೆ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಹಿಳೆಯರು ಇಲಾಖೆಯ ಸೌಲಭ್ಯಗಳನ್ನುಪಡೆದುಕೊಂಡು ಸ್ವಂತ ಉದ್ಯೋಗಗಳನ್ನು ಪ್ರಾರಂಭಿಸಿ ಹೆಚ್ಚು ಹೆಚ್ಚು ಉತ್ಪನ್ನಗಳನ್ನು ತಯಾರಿಸಿ, ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುವುದು. ಈ ರೀತಿ ಪ್ರಚಾರ ಮತ್ತು ಮಾರಾಟಕ್ಕೆ ಇನ್ನು ಹೆಚ್ಚಿನ ರೀತಿಯಲ್ಲಿ ವ್ಯಾಪಕ ಪ್ರಚಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಲಕ್ಷ್ಮೀದೇವಿ ತಿಳಿಸಿದರು.

ಗುಂಪಿನ ಮಹಿಳೆಯರು ತಯಾರಿಸಿದಂತಹ ಬ್ಯಾಗುಗಳನ್ನು ಖರಿದಿಸುವ ಮೂಲಕ ಅವರಿಗೆ ಬೆಂಬಲಿಸಿದರು.
NRLM ಕಡೆಯಿಂದ ಮಹಿಳಾ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಹೆಚ್ಚು ಹೆಚ್ಚು ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಉದ್ಯೋಗ ಸೃಷ್ಟಿ ಹಾಗೂ ಸ್ವಾವಲಂಬಿ ಜೀವನಕ್ಕಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಅಮರಗುಂಡಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದುರ್ಗಪ್ಪ, ವಲಯ ಮೇಲ್ವಿಚಾರಕರಾದ ಮೌನೇಶ, ಶರಣಬಸವ,ಗ್ರಾಮ ಪಂಚಾಯತ ಮಟ್ಟದ ಸಿಬ್ಬಂದಿಗಳು ಹಾಗೂ ಸ್ವಸಹಾಯ ಗುಂಪಿನ ಸದಸ್ಯರುಗಳು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend