ಹಾಲು ಉತ್ಪಾದಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ…!!!ಹಾಲು ಉತ್ಪಾದಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಹಾಲು ಉತ್ಪಾದಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ರಾಮದುರ್ಗ ಗ್ರಾಮದ ಪ್ರಾಥಮಿಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಓಬಮ್ಮ ಅಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಹೆಸರುಗಳನ್ನು ಲಾಟರಿ ಮೂಲಕ ಬರೆದು ಅವರನ್ನು ಲಾಟರಿ ಮುಖಾಂತರ ಆಯ್ಕೆ ಮಾಡಿದಾಗ ಓಬಮ್ಮ ಅಂಜಿನಪ್ಪ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿ ರಾಬಕೋ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕಿ ನಾಗಮಣಿ ಜಿಂಕಲ್ ಮಾತನಾಡಿ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಓಬಮ್ಮ ಅಂಜಿನಪ್ಪ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳವಣಿಗೆಗೆ ಸಹಕಾರ ನೀಡುವ ಮೂಲಕ ತಮ್ಮ ಗ್ರಾಮದಲ್ಲಿ ಮಹಿಳೆಯರು ಹೈನುಗಾರಿಕೆಗೆ ಹೆಚ್ಚಿನ ಒತ್ತುಕೊಟ್ಟು ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಗ್ರಾಮ ಪಂಚಾಯತಿ ಸದಸ್ಯರಾದ ಓ.ರಾಜಪ್ಪ. ಶಿವಶಂಕರ. ಬಿ ರವೀಂದ್ರ. ರವಿಕುಮಾರ್. ಬಸವರಾಜ್. ಪೂಜಾರಿ ಪಾಲಣ್ಣ. ಸತೀಶ್. ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂ.ಸಿದ್ದನಗೌಡ ಉಪಸ್ಥಿತರಿದ್ದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend