ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಹಾಗೂ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ 23ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಧರಣಿಯಲ್ಲಿ ಭಾಗವಹಿಸಿದೆನು.
ಅವರ ಬೇಡಿಕೆ ನ್ಯಾಯಯುತವಾಗಿದೆ. ವಾಲ್ಮೀಕಿ ಸಮಾಜ ಸದಾ ಶೋಷಣೆಗೆ ಒಳಗಾಗುತ್ತಾ ಬಂದಿದ್ದು ಶಿಕ್ಷಣ, ಉದ್ಯೋಗ ಹಾಗೂ ಸಮುದಾಯದ ವಿವಿಧ ವಲಯಗಳಿಗೆ ಮೀಸಲಾತಿ ಕಲ್ಪಿಸಲು ಹಾಗೂ ಸಮುದಾಯದ ಏಳಿಗೆಗಾಗಿ ಶ್ರೀಗಳು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಪರಿಶಿಷ್ಟ ಪಂಗಡವನ್ನು ಸಮಾಜದ ಮುನ್ನೆಲೆಗೆ ತರಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಅನುಷ್ಠಾನಕ್ಕೆ ಶ್ರೀಗಳು ಹಮ್ಮಿಕೊಂಡಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ…

ವರದಿ.ಚಕ್ರಿ ಬಸವರಾಜ್, ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
