ಜೇಮ್ಸ್ ಆಗಿ ಹೊರಬಂದ “ಅಪ್ಪು” ಸಿನಿಮಾ ನೋಡಲು ನೂಕು ನುಗ್ಗಲು…!!!

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬವನ್ನು ಗುರುವಾರ ಮಾರ್ಚ್ 17ರಂದು ಆಚರಿಸಲಾಗುತ್ತಿದ್ದು, ಅವರ ನಟನೆಯ ಕೊನೆಯ ಸಿನಿಮಾ “ಜೇಮ್ಸ್‌’ ಬಿಡುಗಡೆಯಾಗಿದ್ದು, ಚಿತ್ರ ನೋಡಿ ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ. ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಿ ಸಂಭ್ರಮಿಸಿದರೆ, ಅದೇ ಕ್ಷಣ ಅವರಿಲ್ಲವಲ್ಲ ಎಂದು ಭಾವುಕರಾಗುತ್ತಿದ್ದಾರೆ. ಚಿತ್ರ ಬಿಡುಗಡೆಯಾದಾಗ ಪುನೀತ್‌ ರಾಜ್‌ಕುಮಾರ್‌ ತಮ್ಮೊಂದಿಗಿಲ್ಲ ಸತ್ಯವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗದೆ ಹಲವಾರು ಚಿತ್ರ ಮಂದಿರದಲ್ಲಿ ಕಣ್ಣೀರಿಟ್ಟಿದ್ದಾರೆ.

ಚಿತ್ರ ಮಂದಿರಗಳ ಎದುರು ಭಾರಿ ಸಂಖ್ಯೆಯ ಅಭಿಮಾನಿಗಳು ಕಂಡು ಬಂದಿದ್ದು, ಈಗಾಗಲೇ ಹಲವು ಚಿತ್ರಮಂದಿರಗಳಲ್ಲಿ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

ಅಪ್ಪು ಅಭಿಮಾನಿಗಳು ಹುಟ್ಟುಹಬ್ಬವನ್ನು ನಾನಾ ರೀತಿಯ ಸಾಮಾಜಿಕ ಕಾರ್ಯಗಳ ಮೂಲಕ ಆಚರಿಸುತ್ತಿದ್ದಾರೆ. . ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌ ಸಮಾಧಿ ಬಳಿ ಅಭಿಮಾನಿಗಳು ಪುನೀತ್‌ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ . ಅವರ ಸಮಾಧಿಗೆ ಪೂಜೆ ಸಲ್ಲಿಸಿ ಪುಷ್ಪ ನಮನವನ್ನು ಮಾಡಿ ಗೌರವ ಸಲ್ಲಿಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅಪ್ಪು ಅಭಿಮಾನಿಗಳು ಚಿತ್ರ ನೋಡಲು ಉತ್ಸುಕರಾಗಿದ್ದಾರೆ.

“ಜೇಮ್ಸ್‌’ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ನಾಲ್ಕು ಸಾವಿರಕ್ಕೂ ಹೆಚ್ಚು ಶೋಗೆ ಸಾಕ್ಷಿಯಾಗಲಿದೆ. ಕೇವಲ ಕನ್ನಡವಷ್ಟೇ ಅಲ್ಲದೇ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದೆ.

“ಜೇಮ್ಸ್‌’ ಚಿತ್ರ ಬಿಡುಗಡೆ ಮತ್ತು ಜನ್ಮದಿನದಂದು ಅವರ ಕುಟುಂಬ ವರ್ಗಕ್ಕೆ ಇದು ಅಪ್ಪು ಅವರ ಕೊನೆಯ ಸಿನಿಮಾ ಎಂಬುದನ್ನು ನೆನೆಸಿಕೊಂಡರೆ ಹೃದಯ ಭಾರವಾಗುತ್ತಿದೆ. ಈಗ ಅಪ್ಪು ಅವರ ಕೊನೆಯ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಹಾಗೂ ರಾಘವೇಂದ್ರ ರಾಜ್‌ಕುಮಾರ್‌ ನಟಿಸಿದ್ದು, ಮೂವರು ಅಣ್ಣ ತಮ್ಮಂದಿರು ಒಂದೇ ಚಿತ್ರದಲ್ಲಿ ನಟಿಸಬೇಕೆಂಬ ಆಸೆ ಉಳಿದು ಹೋಗಿತ್ತು. ಡಾ. ರಾಜ್ ಕುಟುಂಬ ಇಂದು ಇಂದು ಭಾರಿ ನೋವಿನಲ್ಲಿ ಮುಳುಗಿದೆ…

ವರದಿ. ಮಂಜುನಾಥ್, ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend