ಇಟ್ಟಿಗಿ ಗ್ರಾಮ ಪಂಚಾಯತಿಯಲ್ಲಿ ನಡೆದ ‘ವೀರ ವನಿತೆ ಒನಕೆ ಓಬ್ಬವ್ವನ ಜಯಂತಿ…
ವಿಜಯನಗರ ಜಿಲ್ಲೆ, ಹೂವಿನ ಹಡಗಲಿ ತಾಲ್ಲೂಕಿನ ಇಟ್ಟಿಗಿ ಗ್ರಾಮ ಪಂಚಾಯತಿ ಕಛೇರಿಯಲ್ಲಿ ‘ಸರ್ಕಾರದ ಆದೇಶದಂತೆ ಈ ದಿನ ಸಾಂಕೇತವಾಗಿ ಇಟ್ಟಿಗಿ ಗ್ರಾ ಪಂ ಯಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತೆಯನ್ನು ದಿನಾಂಕ17-03-2022 ರಂದು ಆಚರಿಸಲಾಯಿತು….ವಿಶೇಷ ವಾದ ಈ ಒಂದು ಪೂಜಾ ಕಾರ್ಯಕ್ರಮದಲ್ಲಿ P D O ಉಮೇಶ್ ಜಹಾಗಿರ್ದಾರ್, ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಗ್ರಾ. ಪಂ. ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. *ಒನಕೆ ಓಬ್ಬವ್ವನ ಇತಿಹಾಸ* ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ. *ಓಬ್ಬವ್ವನಿಗೆ ಒನಕೆ ಓಬ್ಬವ್ವ ಎಂದು ಬಿರುದು ಬಂದ ಕಥೆ* ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು.ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು. ಇಂತಹ ಧೀರ ಮಹಿಳೆಯರ ಆದರ್ಶಗಳನ್ನು ಇಂದಿನ ಮಹಿಳೆಯರು ಅವಶ್ಯಕತೆ ರೂಢಿಸಿಕೊಳ್ಳೆಲೆಂದು ನಮ್ಮ ಪತ್ರಿಕೆಯ ಆಶಯ.

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
