;

ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಪಲ್ಟಿ ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದು ರಾಜ್ಯ ಸರ್ಕಾರ ಘೋಷಿಸಿದೆ…!!!

ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಪಲ್ಟಿ ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದು ರಾಜ್ಯ ಸರ್ಕಾರ ಘೋಷಿಸಿದೆ.

ಪರಿಹಾರದ ಕುರಿತು ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದು, ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದು.ಇನ್ನು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಿದೆ. ಇನ್ನು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ರಾಮುಲು 1ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಅಂದ್ಹಾಗೆ, ಇಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಪಳವಳ್ಳಿ ಕಟ್ಟೆ ಬಳಿ ತಿರುವಿನಲ್ಲಿ ಎಸ್ ವಿಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ವೈ.ಎ.ಹೊಸಕೋಟೆ ಮೂಲದ ಕಲ್ಯಾಣ್ (18), ಅಮೂಲ್ಯ (17), ಅಜಿತ್ (21) ಹಾಗೂ ಶಾ.ನವಾಜ್ (19) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಪಾವಗಡ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ…

ವರದಿ, ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend