;

ಬಾದರ್ಲಿ ಹೋಬಳಿಯ ಗೊಣ್ಣಿಗನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ…!!!

ಬಾದರ್ಲಿ ಹೋಬಳಿಯ ಗೊಣ್ಣಿಗನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ.

ಸಿಂಧನೂರು : ಮಾಜಿ ಸಚಿವರು ಹಾಗೂ ಶಾಸಕರಾದ ವೆಂಕಟರಾವ್ ನಾಡಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ತಾಲೂಕಿನ ಬಾದರ್ಲಿ ಹೋಬಳಿಯ ಗೋಣಿಗನೂರ ಗ್ರಾಮದಲ್ಲಿ ಜರುಗಿತು, ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ ಶಾಸಕ ವೆಂಕಟರಾವ್ ನಾಡಗೌಡ ಅವರು ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ, ತಹಸೀಲ್ದಾರ ಕಚೇರಿಗೆ ಅಲೆಯುವ ಪರಿಸ್ಥಿತಿಯನ್ನು ತಪ್ಪಿಸಲು ಸರಕಾರ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಯೋಜನೆಯ ಅನುಸಾರ ಡಿಸಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಒಂದು ಗ್ರಾ.ಪಂ.ಭೇಟಿ ನೀಡಿ ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಪೌತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಹಳ್ಳಿಯ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು. ಜನಸಾಮಾನ್ಯರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಂತರ ಮಾನ್ಯ ಶಾಸಕರಿಗೆ ಗೋಣಿಗನೂರ ಗ್ರಾಮಸ್ತರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ರಾಹುಲ್ ಎಸ್. ಸುಂಕನೂರು ಸಹಾಯಕ ಆಯುಕ್ತರು ಲಿಂಗಸೂಗೂರು, ತಹಶೀಲ್ದಾರಾದ ಮಂಜುನಾಥ ಭೋಗವತಿ, ಸುದೀಪಕುಮಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು,ಅಮರ ಗುಂಡಪ್ಪ ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ,ಪಿಡಿಓ ಬಾದರ್ಲಿ, ಡಾ.ಚನ್ನನಗೌಡ ಪಾಟೀಲ
NRLM ಕಾರ್ಯಕ್ರಮ ವ್ಯವಸ್ಥಾಪಕ ವೀರಭದ್ರಗೌಡ, ಗ್ರಾ.ಪಂ ಸದಸ್ಯರು,ವಿವಿಧ ರಾಜಕೀಯ ಮುಖಂಡರು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;