ಮುಂದಿನ ಆರು ತಿಂಗಳಲ್ಲಿ ಚಳ್ಳಕೆರೆ ತಾಲ್ಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಕೆಲಸವನ್ನು ಹರಸಿಕೊಂಡು ಯಾರು ಬರುವುದಿಲ್ಲವೆಂದು ಚಳ್ಳಕೆರೆ ತಾಸಿಲ್ದಾರ ಏನ್, ರಘುಮೂರ್ತಿ ಹೇಳಿದರು. ಇಂದು ತಾಲೂಕಿನ ಮುಸ್ತಲಾಗುಮ್ಮಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಈ ಕಾರ್ಯಕ್ರಮವನ್ನು ಶೇಕಡ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಈ ಕ್ಷೇತ್ರದ ಶಾಸಕರು ಹಾಗೂ ಮಂತ್ರಿಗಳು ಕನಸಾಗಿದೆ ಈ ನಿಟ್ಟಿನಲ್ಲಿ ತಾಲೂಕ್ ಆಡಳಿತದ ಎಲ್ಲಾ ಅಧಿಕಾರಿಗಳು ಕಂಕಣಬದ್ಧರಾಗಿ ಕೆಲಸ ಮಾಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ರೈತರ ಪಹಣಿ ಪಿಂಚಣಿ ಪೋಡಿ ರೈತರ ಪರಿಹಾರ ದಾರಿ ವಿವಾದ ಸಾನ ಸಮಸ್ಯೆ ಇನ್ನೂ ಹತ್ತು ಹಲವು ಸಮಸ್ಯೆಗಳನ್ನು ಹೊತ್ತುಕೊಂಡು ತಾಲೂಕು ಕಚೇರಿಗೆ ಬರುವ ಅಗತ್ಯವಿರುವುದಿಲ್ಲ ಸಾರ್ವಜನಿಕರು ಕೂಡ ಜಾಗೃತರಾಗಬೇಕು ಮತ್ತು ಆಡಳಿತ ವ್ಯವಸ್ಥೆಯನ್ನು ಪ್ರಶ್ನೆ ಮಾಡುವ ಛಾತಿಯನ್ನು ರೂಡಿಸಿಕೊಳ್ಳಬೇಕು ಅಧಿಕಾರಿಗಳು ತಪ್ಪು ಮಾಡಿದಾಗ ಅವರುಗಳ ಕಿವಿ ಹಿಂಡುವ ಕೆಲಸವನ್ನು ಮಾಡಬೇಕು ಕಂದಾಯ ಇಲಾಖೆ ಎಲ್ಲ ಅಧಿಕಾರಿಗಳು ತಾಲೂಕಿನ ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ದಿನದ 24 ಗಂಟೆಯಲ್ಲಿ ನಮ್ಮಗಳ ಸೇವೆಯನ್ನು ತಾವುಗಳು ಪಡೆಯಬಹುದೆಂದು ಗ್ರಾಮಸ್ಥರಿಗೆ ಹೇಳಿದರು ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ತೋಟಗಾರಿಕಾ ಇಲಾಖೆ ಮುಂತಾದ ರಾಜ್ಯಗಳಿಂದ ಕೂಡ ಮಾಡುವಂತ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ವಿವರಣೆ ನೀಡಲಾಯಿತು ಶಾಲಾ ಮಕ್ಕಳು ಅಂಗನವಾಡಿ ಕಾರ್ಯಕರ್ತರು ಮತ್ತು ರೈತರಿಂದ ಕಾರ್ಯಕ್ರಮ ಉದ್ಘಾಟಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕ್ರಯ್ಯ ಉಪಾಧ್ಯಕ್ಷೆ ಶ್ರೀಮತಿ ರೇವಣ್ಣ ಮತ್ತು ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರು ಶಿಕ್ಷಕರು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ.ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
