ಅಪಘಾತ ಗಾಯಾಳುಗಳನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ.
ಸಿಂಧನೂರು : ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್ನಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿರ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತಾವೇ ಮುಂದು ನಿಂತು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದ ಮಾಜಿ ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ ನವರು ಮಾನವೀಯತೆ ಮೆರೆದಿದ್ದಾರೆ.
ನಗರದ ಹಿರೇಹಳ್ಳ ಸೇತುವೆ ಮೇಲೆ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿತ್ತು.ಬಳಗಾನೂರು ತಮ್ಮ ಕಾರ್ಯಕರ್ತರ ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಗಂಭೀರ ಗಾಯಗಳಾಗಿ ರಕ್ತ ಸೋರುತ್ತಿರುವುದು ನೋಡಿದ ಕೆ. ಕರಿಯಪ್ಪನವರು ತಕ್ಷಣ ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ…
ವರದಿ.ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
