ರಾಯಬಾಗ ವಿಧಾನಸಭಾ ಕ್ಷೇತ್ರದ ನಂದಿಕುರಳಿ ಗ್ರಾಮದ ಶ್ರೀ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡೆ.
ಸುಂದರ ಹಳ್ಳಿ-ಸುಂದರ ಬದುಕು ಎಂಬ ಧ್ಯೇಯವನ್ನು ಹೊಂದಿರುವ ಈ ಕಾರ್ಯಕ್ರಮದಲ್ಲಿ, ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಇತ್ತು. ಆ ಅಧಿಕಾರಿಗಳ ಮೂಲಕ ಗ್ರಾಮದ ಹಾಗೂ ಗ್ರಾಮಸ್ಥರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲಾಗುತ್ತದೆ. ಇದೇ ವೇಳೆ ಹಿರಿಯ ನಾಗರಿಕರಿಗೆ ಪಿಂಚಣಿ ಪತ್ರಗಳನ್ನು ಹಾಗೂ ಮತದಾನ ಕಾರ್ಡ್ ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ವೀರಭದ್ರ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು. ತಹಶಿಲ್ದಾರರನ್ನು ಒಳಗೊಂಡ ತಾಲ್ಲೂಕಾ ಇಲಾಖೆಗಳ ಎಲ್ಲಾ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
