ಬಳ್ಳಾರಿಯಲ್ಲಿ ವಿಶ್ವ ಜಲ ದಿನಾಚರಣೆ
ನೀರು ಅಮೂಲ್ಯ;ಪೋಲಾಗದಂತೆ ನೋಡಿಕೊಳ್ಳಿ:ಜಿಪಂ ಸಿಇಒ ಜಿ.ಲಿಂಗಮೂರ್ತಿ
ಬಳ್ಳಾರಿ:- ನೀರು ಅಮೂಲ್ಯ; ಮಿತವ್ಯಯವಾಗಿ ಎಷ್ಟು ಬೇಕು ಅಷ್ಟನ್ನೇ ಬಳಸಬೇಕು ಮತ್ತು ಪೋಲಾಗದಂತೆ ನೋಡಿಕೊಳ್ಳಬೇಕು ಹಾಗೂ ನೀರಿನ ಮಹತ್ವ ಕುರಿತು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಜಿಪಂ ಸಿಇಒ ಜಿ.ಲಿಂಗಮೂರ್ತಿ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ವೀಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವ ಜಲ ದಿನವು ಕೇವಲ ಒಂದು ದಿನದ ದಿನಾಚರಣೆಯಾಗದೇ, ಪ್ರತಿದಿನ ನಾವು ಬಳಸುವ ನೀರಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಹಾಗೂ ನಗರ ಮತ್ತು ಹಳ್ಳಿ ಪ್ರದೇಶಗಳಲ್ಲಿ ಹೆಚ್ಚೆಚ್ಚು ಅರಿವು ಮೂಡಿಸಬೇಕು ಎಂದು ಹೇಳಿದರು.
ಹಿಂದಿನ ಕಾಲದಲ್ಲಿ ನೀರು ತುಂಬಾ ಸರಳವಾಗಿ ಸಿಗುತ್ತಿತ್ತು;ಆದರೆ ಈಗಿನ ದಿನಮಾನಗಳಲ್ಲಿ ನೀರಿನ ಅಭಾವ ಎಲ್ಲೆಡೆ ಉದ್ಭವಿಸಿದೆ.ಹಳ್ಳಿ, ನಗರ ಹಾಗೂ ಕೈಗಾರಿಕಾ ಪ್ರದೇಶ ಸೇರಿದಂತೆ ಇಂತಿಷ್ಟು ಪ್ರಮಾಣದಲ್ಲಿ ನೀರು ವಿಭಜಿಸಿ ಬಳಸುವುದರಿಂದ ನೀರಿನ ಅಭಾವ ತಪ್ಪಿಸಬಹುದು ಎಂದು ಅವರು ಹೇಳಿದರು.
ಜಲಜೀವ ಮಿಶನ್ ಯೋಜನೆ ಅಡಿ ನೀರಿನ ಮೂಲಗಳನ್ನು ಗುರುತಿಸಿ ಪ್ರತಿ ಮನೆ-ಮನೆಗೂ ನಳದ ಸಂಪರ್ಕ ಕಲ್ಪಿಸಿ ನೀರಿನ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ವಿವರಿಸಿದ ಜಿಪಂ ಸಿಇಒ ಜಿ.ಲಿಂಗಮೂರ್ತಿ ಅವರು ಇಂಗುಗುಂಡಿ ತೋಡುವ ಮೂಲಕ ಅಂತರ್ಜಲ ಹೆಚ್ಚಿಸಬಹುದು ಎಂದರು. ಪ್ರತಿಯೊಬ್ಬರೂ ಗಿಡ,ಮರಗಳನ್ನು ಬೆಳೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ವಚ್ಚ ಭಾರತ್ ಮಿಶನ್ ಮತ್ತು ಜಲಜೀವನ್ ಮಿಷನ್ ಯೋಜನೆಯ ಕುರಿತ ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುರೇಂದ್ರನಾಥ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಚಂದ್ರಶೇಖರ್ ಗುಡಿ, ಜಿಪಂ ನ ಉಪಕಾರ್ಯದರ್ಶಿಗಳಾದ ಬಸವರಾಜ ಅಡವಿಮಠ, ಮುಖ್ಯಲೆಕ್ಕಾಧಿಕಾರಿಗಳಾದ ಖಾಜಾಮೈನುದ್ದಿನ್, ಜಿಪಂ ಯೋಜನಾ ನಿರ್ದೇಶಕರಾದ ಲಕ್ಷಣ ಶೃಂಗೇರಿ ಸೇರಿದಂತೆ ಜಿಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು…

ವರದಿ.ವಿರೇಶ್, ಹಳೇಕೋಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
