ಚಳ್ಳಕೆರೆಯ ನಗರಸಭೆ ಆವರಣದಲ್ಲಿ ಆಯೋಜಿಸಿದ್ದ “ಸಂಜೀವಿನಿ ಮಾಸಿಕ ಸಂತೆ” ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಉದ್ಘಾಟಿಸಿದರು
75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಪಂಚಾಯತಿ, ಚಳ್ಳಕೆರೆ ತಾಲೂಕು ಪಂಚಾಯತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಶ್ರೀ ಬೆಳಕು ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ, ನಗರಂಗೆರೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಎನ್.ಆರ್.ಎಲ್.ಎಂ (ಸಂಜೀವಿನಿ) ಯೋಜನೆಯಡಿ ರೂಪುಗೊಂಡಂತಹ ಈ ಮಾಸಿಕ ಸಂತೆಯಲ್ಲಿ ಗ್ರಾಮಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವ-ಸಹಾಯ ಗುಂಪಿನ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸಿರುವ ಉತ್ಪನ್ನಗಳನ್ನು ಮಾರಾಟಕ್ಕೆ ಇಡಲಾಗವುದು..

ವರದಿ.ಚಕ್ರಿ ಬಸವರಾಜ್, ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
