ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಿ : ಶಾಸಕರಿಂದ ಅಧಿಕಾರಿಗಳಿಗೆ ಖಡಕ ಸೂಚನೆ.
ಸಿಂಧನೂರು :ತಾಲೂಕಿನ 30 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಬೇಸಿಗೆ ದಿನಗಳಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು, ಎಲ್ಲಾ ಕೆರೆಗಳಲ್ಲಿ ನೀರು ತುಂಬಿಸಲು ಕ್ರಮ ಜರುಗಿಸಬೇಕು.ಮುಂದಿನ ಬೇಸಿಗೆ ಕಾಲದ ಮೂರು ತಿಂಗಳ ಕಾಲ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ವೆಂಕಟರಾವ್ ನಾಡಗೌಡ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಬಾನುವಾರ ನಡೆದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಬೇಸಿಗೆ ಆರಂಭವಾಗಿರುವುದರಿಂದ ಏಪ್ರಿಲ್ 5 ರೊಳಗಾಗಿ ಸರ್ಕಾರಿ ಮತ್ತು ಖಾಸಗಿ ಕೆರೆಗಳನ್ನು ಸ್ವಚ್ಛ ಮಾಡಿ ನೀರು ತುಂಬಿಸಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಬಾರದು
ಕೆಳ ಭಾಗದ ಪ್ರದೇಶಗಳಿಗೆ ನೀರು ಸರಬರಾಜು ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದರೆ ಅಧಿಕಾರಿಗಳೇ ನೇರಹೊಣೆ ಹೊರ ಬೇಕಾಗುತ್ತದೆ. ಬೇಸಿಗೆಯಲ್ಲಿ ಜನ ಹೆಚ್ಚು ನೀರು ಬಳಕೆ ಮಾಡುತ್ತಿರುವುದರಿಂದ ಕೆಳ ಭಾಗದ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು, ಒಂದು ವೇಳೆ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಸರಿಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ಮುಂದಿನ ಮಳೆಗಾಲದವರೆಗೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಲರ್ಟ್ ಆಗಿರಬೇಕು.ಕುಡಿಯುವ ನೀರು ತುಂಬಿಸಿಕೊಳ್ಳಲು ಯಾರಾದರೂ ಅಡ್ಡಿಪಡಿಸಿದರೆ ಅಂತಹವರ ಬಗ್ಗೆ ಅಧಿಕಾರಿಗಳು ಪೋಲಿಸ್ ಇಲಾಖೆಯ ಗಮನಕ್ಕೆ ತಂದರೆ ಅಂತವರ ಮೇಲೆ ಸೂಕ್ತ ಕಾನೂನಿನ ಕ್ರಮ ತೆಗೆದುಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ತಿಳಿಸಿದರು.
ಸಿಪಿಐ ಉಮೇಶ್ ಕಾಂಬಳೆ ಮಾತನಾಡಿ ಕೆರೆಗಳಿಗೆ ನೀರು ತುಂಬಿಸುವ ಅಥವಾ ಇನ್ನಿತರ ಯಾವುದೇ ಸಂಧರ್ಭದಲ್ಲಿ ಯಾರಾದರೂ ಅಡಚಣೆ ಉಂಟುಮಾಡಿದರೆ 112 ಗೆ ಉಚಿತ ದೂರವಾಣಿ ಕರೆ ಮಾಡಿದರೆ ತಕ್ಷಣವೇ ಸ್ಥಳಕ್ಕೆ ದಾವಿಸಿ ಸಮಸ್ಯೆ ಸರಿ ಮಾಡಲಾಗುವುದು ಎಂದರು.
ಈ ಸಂಧರ್ಭದಲ್ಲಿ ಹೋಲಿಗೆ ಯಂತ್ರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಮಂಜುನಾಥ ಭೋಗಾವತಿ,ಕಾರ್ಯನಿರ್ವಾಹಕ ಅಧಿಕಾರಿ ಲಕ್ಷೀದೇವಿ, ನೀರಾವರಿ ಇಲಾಖೆಯ ಅಧಿಕಾರಿಗಳಾದ ಅಶೋಕ ರಡ್ಡಿ, ಹನುಮಂತಪ್ಪ, ಈರಣ್ಣ, ಅಮರಗುಂಡಪ್ಪ, ಪಿಎಸ್ ಐಗಳಾದ ಸೌಮ್ಯ ಎಂ. ಹಿರೇಮಠ, ಎರಿಯಪ್ಪ, ಚಂದ್ರಪ್ಪ, ಜೆಇಗಳಾದ ಶ್ರೀನಿವಾಸ, ಧನರಾಜ, ಎಲ್ಲಾ ಗ್ರಾ.ಪಂ. ಅಧ್ಯಕ್ಷರು, ಪಿಡಿಓಗಳು ಭಾಗವಹಿಸಿದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
