ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ.
ಸವಿಂದಾನ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಜನತೆಯ ಹಕ್ಕುಗಳ ಉಳಿವಿಗಾಗಿ ರೈತ ವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ, ಬೆಲೆ ಏರಿಕೆಯ ನಿಯಂತ್ರಣಕ್ಕಾಗಿ,ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ, ರೂ,28000 ಸಮಾನ ಕನಿಷ್ಠ ವೇತನ, ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ತಡೆಗಾಗಿ, ಇನ್ನು ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದಗಾಂಧಿ ಚಿತಾಭಸ್ಮದಿಂದ ಪಟ್ಟಣದ ಬೀದಿಗಳಲ್ಲಿ ಸಂಚರಿಸಿ ಸರ್ಕಾರದ ವಿರೋಧ ನೀತಿ ಖಂಡಿಸಿ ಘೋಷಣೆಗಳನ್ನು ಕೂಗಿದರು, ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಪ್ರತಿಭಟನೆ ಮೆರವಣಿಗೆ ಸಾಗಿ ಮದಕರಿ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಸಿ ವಿರುಪಾಕ್ಷಪ್ಪನವರು ಮಾತನಾಡಿ ದೇಶದಲ್ಲಿರುವ ರೈತರು ವಿದ್ಯಾರ್ಥಿಗಳು ಯುವಜನತೆ ಅಧೋಗತಿಗೆ ಸಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು, ರೈತ ತಾನು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ ಕೆಲವೊಂದು ಕಡೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅನ್ನುವ ಪರಿಸ್ಥಿತಿ ಬಂದೊದಗಿದೆ, ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ ರೈತರು ಸಾಲಗಾರರಾಗಿ ವ್ಯವಸಾಯವನ್ನು ತ್ಯಜಿಸಿ ಕಂಗಾಲಾಗಿದ್ದಾರೆ, ವಿದ್ಯಾರ್ಥಿಗಳು ಶಿಕ್ಷಣದ ವೆಚ್ಚವನ್ನು ಬರಿಸದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ದೇಶದಲ್ಲಿ ಉದ್ಯೋಗ ಸಿಗದೇ ಜೀವನ ಮಾಡಲು ಕಷ್ಟಕರ ವಾತಾವರಣ ಸೃಷ್ಟಿಯಾಗಿದೆ, ಜನರು ಜೀವನ ಮಾಡಲು ಆಗುತ್ತಿಲ್ಲ ದಿನಬಳಕೆ ವಸ್ತುಗಳು ಗಗನಕ್ಕೇರಿದ ಎಣ್ಣೆ ಅಕ್ಕಿ-ಬೇಳೆ-ತರಕಾರಿ ಪೆಟ್ರೋಲ್ ಡೀಸೆಲ್ ಹಾಗೂ ಅಡುಗೆ ಗ್ಯಾಸ್ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ ಇಂತಹ ಪರಿಸ್ಥಿತಿಯಲ್ಲಿ ಜೀವನ ಮಾಡುವುದಾದರೂ ಹೇಗೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು, ಈ ಪ್ರತಿಭಟನೆಯಲ್ಲಿ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು ಕಾರ್ಮಿಕರ ಸಮಸ್ಯೆ ಕುರಿತು ಮಾತನಾಡಿದರು,
ಈ ಪ್ರತಿಭಟನೆಯಲ್ಲಿ. ಸಿ ವಿರುಪಕ್ಷಪ್ಪ. ಗುನ್ನಳ್ಳಿ ರಾಘವೇಂದ್ರ. ಬಿಟಿ ಗುದ್ದಿ ಚಂದ್ರು, ಕಾರ್ಮಿಕ ಹಾಗೂ ರೈತರು, ಸಿಐಟಿಯು ಕಾರ್ಯಕರ್ತರು, ಮಾಜಿ ದೇವದಾಸಿ ಮಹಿಳೆಯರು, ಕಟ್ಟಡ ಹಾಗೂ ಇತರೆ ಕಾರ್ಮಿಕರು, ನೂರಾರು ಮಹಿಳೆಯರು, ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಿಐಟಿಯು ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು,ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು. ಈ ಪ್ರತಿಭಟನೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ನೀಡಿತ್ತು…

ವರದಿ.ಡಿ.ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
