;

ಹಸಿರುಕ್ರಾಂತಿ ಹರಿಕಾರ ಡಾ.ಬಾಬುಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ…!!!

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಸಿರುಕ್ರಾಂತಿ ಹರಿಕಾರ ಡಾ.ಬಾಬುಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ ಏ.14ರಂದು
ಹೊಸಪೇಟೆ(ವಿಜಯನಗರ),: ಜಿಲ್ಲಾಡಳಿತದ ವತಿಯಿಂದ ಮಾಜಿ ಉಪಪ್ರಧಾನಿಗಳು ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಏ.14ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೆರವಣಿಗೆ,ಸ್ತಬ್ಧಚಿತ್ರ,ಆಹಾರ,ವೇದಿಕೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಯಾವುದೇ ಲೋಪಗಳಿಗೆ ಅಸ್ಪದ ನೀಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಏ.14ರಂದು ಮೊದಲಿಗೆ ಮೆರವಣಿಗೆ ಆರಂಭವಾಗಲಿದ್ದು, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದ ಡಿಸಿ ಅನಿರುದ್ಧ ಶ್ರವಣ್ ಅವರು ಪ್ರತಿ ವರ್ಷದಂತೆ ಈ ವರ್ಷವೂ ಹಂಪಿಯಿಂದ ಜ್ಯೋತಿಯೂ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಲಿದೆ. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗುವುದು. ಬೆಳಗ್ಗೆ 11ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಹಜ್,ವಕ್ಫ್ ಹಾಗೂ ಮುಜರಾಯಿ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು
ಚಾಲನೆ ನೀಡಲಿದ್ದು, ಸಂಪನ್ಮೂಲ ವ್ಯಕ್ತಿಯೊಬ್ಬರು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಅವರ ಕುರಿತು ಮಾತನಾಡಲಿದ್ದಾರೆ. ಶಾಸಕರು,ನಿಗಮಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು,ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು.
ಏ.5ರಂದು ಡಾ.ಬಾಬು ಜಗಜೀಚನರಾಂ ಅವರ ಜಯಂತಿಯನ್ನು ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಗುವುದು. ಏ.14ರಂದು ಇಬ್ಬರೂ ಮಹನೀಯರ ಜಯಂತಿಯನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಜಯಂತಿ ನಿಮಿತ್ತ ಅಂಬೇಡ್ಕರ್ ಅವರ ಕುರಿತು ಶಾಲಾ‌ಮಕ್ಕಳಿಗೆ ಪ್ರಬಂಧ,ರಸಪ್ರಶ್ನೆ,ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳು ಏರ್ಪಡಿಸಿ; ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು;ಇದಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಡಿಡಿಪಿಐ ಕೋಟ್ರೇಶ್ ಅವರಿಗೆ ಸೂಚಿಸಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪರಿಶಿಷ್ಟ ಸಮುದಾಯದ ಪ್ರಮುಖರಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಸ್ಲಂ‌ಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ವಿತರಿಸಲು ಹಾಗೂ ಪರಿಶಿಷ್ಟ ಸಮುದಾಯದ ಜನರ ದೌರ್ಜನ್ಯಗಳಿಗೆ ಸ್ಪಂದಿಸಲು ಸಹಾಯವಾಣಿ ಆರಂಭಿಸಲಾಗುವುದು ಎಂದು ಡಿಸಿ ಅನಿರುದ್ಧ ಶ್ರವಣ್ ಅವರು ಭರವಸೆ ನೀಡಿದರು.
ದಲಿತರ ಕೆರಿಗಳಲ್ಲಿ ಸಭೆ‌ ನಡೆಸಿ ಅವರ ಅಹವಾಲು ಆಲಿಸಲು ಕ್ರಮವಹಿಸಲಾಗುವುದು. ದಲಿತರ ಕುಂದುಕೊರತೆಗಳನ್ನು ಆಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣ ಅವರು ಮಾತನಾಡಿದರು.
ವಿವಿಧ ದಲಿತ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಂಘಟನೆಗಳ ಮುಖಂಡರು ಇದ್ದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಸಿರುಕ್ರಾಂತಿ ಹರಿಕಾರ ಡಾ.ಬಾಬುಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ ಏ.14ರಂದು

ಹೊಸಪೇಟೆ(ವಿಜಯನಗರ),ಮಾ.30(ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಮಾಜಿ ಉಪಪ್ರಧಾನಿಗಳು ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಏ.14ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ತಾಲೂಕು ಪಂಚಾಯತಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮೆರವಣಿಗೆ,ಸ್ತಬ್ಧಚಿತ್ರ,ಆಹಾರ,ವೇದಿಕೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಯಾವುದೇ ಲೋಪಗಳಿಗೆ ಅಸ್ಪದ ನೀಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏ.14ರಂದು ಮೊದಲಿಗೆ ಮೆರವಣಿಗೆ ಆರಂಭವಾಗಲಿದ್ದು, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದ ಡಿಸಿ ಅನಿರುದ್ಧ ಶ್ರವಣ್ ಅವರು ಪ್ರತಿ ವರ್ಷದಂತೆ ಈ ವರ್ಷವೂ ಹಂಪಿಯಿಂದ ಜ್ಯೋತಿಯೂ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಲಿದೆ. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗುವುದು. ಬೆಳಗ್ಗೆ 11ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಹಜ್,ವಕ್ಫ್ ಹಾಗೂ ಮುಜರಾಯಿ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು

ಚಾಲನೆ ನೀಡಲಿದ್ದು, ಸಂಪನ್ಮೂಲ ವ್ಯಕ್ತಿಯೊಬ್ಬರು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಅವರ ಕುರಿತು ಮಾತನಾಡಲಿದ್ದಾರೆ. ಶಾಸಕರು,ನಿಗಮಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು,ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು.

ಏ.5ರಂದು ಡಾ.ಬಾಬು ಜಗಜೀಚನರಾಂ ಅವರ ಜಯಂತಿಯನ್ನು ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಗುವುದು. ಏ.14ರಂದು ಇಬ್ಬರೂ ಮಹನೀಯರ ಜಯಂತಿಯನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಜಯಂತಿ ನಿಮಿತ್ತ ಅಂಬೇಡ್ಕರ್ ಅವರ ಕುರಿತು ಶಾಲಾ‌ಮಕ್ಕಳಿಗೆ ಪ್ರಬಂಧ,ರಸಪ್ರಶ್ನೆ,ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳು ಏರ್ಪಡಿಸಿ; ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು;ಇದಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಡಿಡಿಪಿಐ ಕೋಟ್ರೇಶ್ ಅವರಿಗೆ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪರಿಶಿಷ್ಟ ಸಮುದಾಯದ ಪ್ರಮುಖರಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಸ್ಲಂ‌ಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ವಿತರಿಸಲು ಹಾಗೂ ಪರಿಶಿಷ್ಟ ಸಮುದಾಯದ ಜನರ ದೌರ್ಜನ್ಯಗಳಿಗೆ ಸ್ಪಂದಿಸಲು ಸಹಾಯವಾಣಿ ಆರಂಭಿಸಲಾಗುವುದು ಎಂದು ಡಿಸಿ ಅನಿರುದ್ಧ ಶ್ರವಣ್ ಅವರು ಭರವಸೆ ನೀಡಿದರು.

ದಲಿತರ ಕೆರಿಗಳಲ್ಲಿ ಸಭೆ‌ ನಡೆಸಿ ಅವರ ಅಹವಾಲು ಆಲಿಸಲು ಕ್ರಮವಹಿಸಲಾಗುವುದು. ದಲಿತರ ಕುಂದುಕೊರತೆಗಳನ್ನು ಆಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣ ಅವರು ಮಾತನಾಡಿದರು.

ವಿವಿಧ ದಲಿತ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಂಘಟನೆಗಳ ಮುಖಂಡರು ಇದ್ದರು…

ವರದಿ.ಗಣೇಶ್, ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend