;

ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧ…!!!

ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧ – ಶಿವಕುಮಾರ್ ಹಿರೇಮಠ ಹಾಗೂ ಅಂಬಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ.

ಲಿಂಗಸುಗೂರು:ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಬೆಂಗಳೂರು ಮತ್ತು ವಿಜ್ಞಾನೇಶ್ವರ ಸರಕಾರಿ ಕಾನೂನು ಕಾಲೇಜು ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಾ.30 2022 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ” ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ನಗರದ ಸ್ಪರ್ಧೆಯಲ್ಲಿ ಶ್ರೀಮತಿ ಬಸ್ಸಮ್ಮ ಗುರುಲಿಂಗಪ್ಪ ಕಾನೂನುಮಹಾವಿದ್ಯಾಲಯದ ವಿದ್ಯಾರ್ಥಿಗಳಾದಶಿವಕುಮಾರ್ ಹಿರೇಮಠ (ಎಲ್ ಎಲ್ ಬಿ ಐದನೇ ಸೆಮಿಸ್ಟರ್) ಹಾಗೂ ಅಂಬಮ್ಮ(ಎಲ್ ಎಲ್ ಬಿ ಮೊದಲ ಸೆಮಿಸ್ಟರ್) ಇವರುಗಳು ರಾಜ್ಯಮಟ್ಟದ ಮಾದರಿ ವಿಧಾನಸಭೆಗೆ ಆಯ್ಕೆ ಆಗಿದ್ದು, ಕಾನೂನು ಮಹಾವಿದ್ಯಾಲಯವನ್ನು ರಾಜ್ಯಮಟ್ಟದಲ್ಲಿ ಗುರುತಿಸುವಲ್ಲಿ ತುಂಬಾ ಯಶಸ್ವಿಯಾಗಿದ್ದಾರೆ, ಹಾಗೆ ನಾನು ಮಾಡಬಲ್ಲೆ ಎಂಬ ನಂಬಿಕೆ ಇದ್ದರೆ ಯಶಸ್ಸಿನ ಅರ್ಧದಾರಿ ಕ್ರಮಿಸಿದಂತೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸಂಜೀವ ಕುಮಾರ್ ಕಂದಗಲ್ ಅವರು ತುಂಬಾ ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.

ಸತತ ಪ್ರಯತ್ನ ಆತ್ಮ ವಿಶ್ವಾಸದಿಂದ ಸ್ಪರ್ಧೆಗೆ ಮುನ್ನುಗ್ಗಿದಾಗ ಯಶಸ್ಸು ತಾನಾಗೇ ಬರುತ್ತದೆ, ಎಂದು ಸಂಸ್ಥೆಯ ಆಡಳಿತಾಧಿಕಾರಿಯಾದ ಸಂತೋಷ್ ಕುಮಾರ್ ಕಡಿವಾಳ ಅವರು ಸ್ಪರ್ಧೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ದೂರವಾಣಿಯ ಕರೆ ಮಾಡುವುದರ ಮುಖಾಂತರ ಗೆಲುವಿಗೆ ಬೆಂಬಲ ಸೂಚಿಸಿದ್ದಾರೆ. ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹುನಕುಂಟಿ ಮಾತನಾಡುತ್ತಾ ಕಾಲೇಜಿನಲ್ಲಿ ಉಪನ್ಯಾಸಕರ ಮಾರ್ಗದರ್ಶನದ ಮೇರೆಗೆ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ವಿಜೇತ ರಾಗಿದ್ದಾರೆ, ಹಾಗೆ ಏಪ್ರಿಲ್ 11.2022 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಾದರಿ ವಿಧಾನಸಭೆ ಅಧಿವೇಶನ ಸ್ಪರ್ಧೆಯಲ್ಲಿ ಗೆಲ್ಲುವರು ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಕಾನೂನು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು,ಸಂಸ್ಥೆಯ ಸಿಬ್ಬಂದಿ ವರ್ಗದವರು, ಸ್ಪರ್ಧೆಯಲ್ಲಿ ಗೆದ್ದಿರುವ ವಿದ್ಯಾರ್ಥಿಗಳಿಗೆ ಶುಭ ಕೊರಿದ್ದಾರೆ….

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;