ಬಾಬು ಜಗಜೀವನ ರಾಮ್ ಅವರ ಜಯಂತಿ ವಿಜಯನಗರ ಜಿಲ್ಲೆ, ಹೂವಿನ ಹಡಗಲಿ ತಾಲ್ಲೂಕಿನ ಇಟ್ಟಿಗಿ ಗ್ರಾಮದಲ್ಲಿ 5-4-2022ರಂದು ಹಸಿರು ಕ್ರಾಂತಿ ಹರಿಕಾರರು ಹಾಗೂ ಮಾಜಿ ಉಪ ಪ್ರಧಾನಿ ಡಾ!! ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಸರಳವಾಗಿ ಗ್ರಾಮ ಪಂಚಾಯತಿ ಕಛೇರಿಯಲ್ಲಿ ಆಚರಿಸಲಾಯಿತು. ಪೂಜೆ,ಮಾಲಾರ್ಪಣೆಯೊಂದಿಗೆ ಶುರುವಾದ ಈ ಕಾರ್ಯಕ್ರಮದಲ್ಲಿ ಇಟ್ಟಿಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಉಮೇಶ್ ಜಾಹಾಗಿರ್ದಾರ್,ಗ್ರಾ ಪಂ ಕ್ಲಕ್೯ ಕಂ ಡಿ ಇ ಓ ಆದ ಹೆಚ್ ಪ್ರಕಾಶ್,ಕೆಎಂ ಕೆ ಮಂಜುನಾಥ, ಹಾಗೂ ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು. ಬಾಬು ಜಗಜೀವನ ರಾಮ್ (೫ ಏಪ್ರಿಲ್ ೧೯೦೮ – ೬ ಜುಲೈ ೧೯೮೬) “ಬಾಬೂಜಿ” ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ರವರು ಅಸ್ಪ್ರಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು. ಇತಿಹಾಸದ ಪುಟಗಳನ್ನು ಹುಡುಕುತ್ತಾ ಹೋದಾಗ ಇನ್ನೂ ಹಲವು ಮಾಹಿತಿಗಳು ನಮಗೆ ಸಿಗುತ್ತವೆ.ಇಂತಹ ನಾಯಕರುಗಳು ಮತ್ತೆ ಹುಟ್ಟಿ ಬರಲೆಂದು ನಮ್ಮ ಪತ್ರಿಕೆಯ ಆಶಯ.

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
