;

ಮುಖ್ಯ ಶಿಕ್ಷಕಿ ಶ್ರೀಮತಿ ಅನುಪಮಾ ಅವರಿಗೆ ಸನ್ಮಾನ ಸಮಾರಂಭ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ.
ಮುಖ್ಯ ಶಿಕ್ಷಕಿ ಶ್ರೀಮತಿ ಅನುಪಮಾ ಅವರಿಗೆ ಸನ್ಮಾನ ಸಮಾರಂಭ
ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ, ಯರ ಗುಂಡ್ಲಾ ಹ ಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಅನುಪಮ ರವರು ಸುಮಾರು ಆರು ವರ್ಷಗಳ ಕಾಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದು ಈಗ ವರ್ಗಾವಣೆಗೊಂಡಿರುವ ರಿಂದ ಊರಿನ ಮುಖಂಡರು ಮತ್ತು ಗ್ರಾಮಸ್ಥರಿಂದ ಮುಖ್ಯ ಶಿಕ್ಷಕಿ ಶ್ರೀಮತಿ ಅನುಪಮ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಆರ್. ಬಸವರಾಜ್ ಮಾತನಾಡಿ ನಮ್ಮ ಗ್ರಾಮದ ಶಾಲೆಯಲ್ಲಿ ಆರು ವರ್ಷಗಳ ಕಾಲ ಗ್ರಾಮದ ಮುದ್ದು ಮಕ್ಕಳಿಗೆ ಜ್ಞಾನದಾಸೊ ಹಿಗಳಿಗೆ ಸೇವೆ ಸಲ್ಲಿಸಿದರು, ಊರಿನ ಪ್ರತಿಯೊಬ್ಬ ನಾಗರಿಕರಿಗೆ ಹಾಗೂ ಶಾಲೆಯ ಮಕ್ಕಳ ಪೋಷಕರಿಗೆ ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಶಿಕ್ಷಕಿಯಾಗಿ ದ್ದ ರು. ಉತ್ತಮ ರೀತಿಯಲ್ಲಿ ಮಕ್ಕಳಿಗೆ ಪಾಠ-ಪ್ರವಚನ ಬೋಧನೆ ಮಾಡುತ್ತಿದ್ದರು. ಈಗ ವರ್ಗಾವಣೆ ಆಗಿರುವುದರಿಂದ ಗ್ರಾಮದ ಜನತೆಗೆ ಸ್ವಲ್ಪ ಮನಸ್ಸಿಗೆ ನೋವು ತರುವ ಸಂಗತಿಯಾಗಿದೆ. ಎಂದು ಹೇಳಿ ಇಡೀ ಗ್ರಾಮದ ಪರವಾಗಿ ಅನಂತ ಅನಂತ ಧನ್ಯವಾದಗಳು ಎಂದು ಹೇಳಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು. ಗ್ರಾಮ ಪಂಚಾಯತಿ ಸದಸ್ಯರು ಹಿರಿಯ ಮುಖಂಡರು ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;