;

ತಾಲೋಕು ದಂಡಾಧಿಕಾರಿಗಳ ಸಮ್ಮುಖದಲ್ಲಿ ಆರೋಗ್ಯ ಅಭಿಯಾನ ಸಭೆ…!!!

ಸಿಂಧನೂರು : ನಗರದ ತಾಲೂಕು ಕಛೇರಿಯಲ್ಲಿ ತಾಲೂಕು ದಂಡಾಧಿಕಾರಿ ಮಂಜುನಾಥ ಭೋಗಾವತಿ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನೆ ಅಡಿಯಲ್ಲಿ ಆರೋಗ್ಯ ಮೇಳದ ಪೂರ್ವಭಾವಿ ಸಭೆ ಇಂದು ತಾಲೂಕು ಕಛೇರಿಯಲ್ಲಿ ನಡೆಸಲಾಯಿತು.

2022-23 ನೇ ಸಾಲಿನ ಭಾರತ ಸರ್ಕಾರವು ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆರೋಗ್ಯ ಮೇಳವನ್ನು ಏಪ್ರಿಲ್ 18 ರಿಂದ ಏಪ್ರಿಲ್ 30 ರೊಳಗಾಗಿ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಆರೋಗ್ಯ ಮೇಳವನ್ನು ಜನ ಸಮುದಾಯಕ್ಕೆ ಆಯೋಜಿಸಲಾಗಿದೆ. ಮತ್ತು ಈ ಆರೋಗ್ಯ ಮೇಳವನ್ನು ಎಲ್ಲಾ ಇಲಾಖೆ ಅಧಿಕಾರಿಗಳು ನೀಡಿದ ಜವಾಬ್ದಾರಿಯನ್ನು ನಿರ್ವಹಿಸಿ ಮತ್ತು ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಬೇಕೆಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿದೇವಿ,ನಗರ ಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಸಮಾಜ ಕಲ್ಯಾಣ ಇಲಾಖೆ ವಿಜಯಲಕ್ಷ್ಮಿ ,ಡಾ ಆಯ್ಯನಗೌಡ,ಹನುಮಂತರಡ್ಡಿ,ಸಿಡಿಪಿಓ ಗಳಾದ ಅಶೋಕ, ಸುದೀಪಕುಮಾರ, ಹಾಗೂ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು….

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;