ಬಣವಿಕಲ್ಲು ಗ್ರಾಮ ಪಂಚಾಯಿತಿ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮ ಪಂಚಾಯಿತಿಯಲ್ಲಿ ಇಂದು ದಿನಾಂಕ 3-5-22 ರಿ ಮಂಗಳವಾರದಂದು ನಡೆದ ಶ್ರೀ ಬಸವೇಶ್ವರ ಜಯಂತಿಯನ್ನು ಆಚರಣೆ ಮಾಡಿದರು, ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಜಿ.ಚಿತ್ತಮ್ಮ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ನಡೆಸುವುದರ ಮೂಲಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಹಾಗೂ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ದುರುಗಪ್ಪ ಚಂದ್ರಮ್ಮ ಮತ್ತು ಸದಸ್ಯರುಗಳು ಭಾಗವಹಿಸಿದ್ದರು,ಈ ಕಾರ್ಯಕ್ರಮದಲ್ಲಿ ಕೇಂದ್ರಬಿಂದುವಾದ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳಾದ ಶ್ರೀ ಹಾಲಸ್ವಾಮಿ ಸರ್ ಹಾಗೂ ಗ್ರಾಮಪಂಚಾಯತಿಯ ಸಿಬ್ಬಂದಿಯವರು ಶ್ರೀ ಬಸವೇಶ್ವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ಬಿ.ಎಂ ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
