ಸಂಭ್ರಮದ ಬಸವೇಶ್ವರ ಜಯಂತಿ. ದಿನಾಂಕ 3-5-2022 ರ ಮಂಗಳವಾರ ನಡೆದ ಶ್ರೀ ಬಸವೇಶ್ವರ ಜಯಂತಿಯನ್ನು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮದಲ್ಲಿ ಅದ್ದೂರಿಯಾಗಿ ಶ್ರೀ ಬಸವೇಶ್ವರ ಜಯಂತಿಯನ್ನು ವೀರಶೈವ ಸಮಾಜದ ಮುಖಂಡರುಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲ ಸಮುದಾಯದ ಮುಖಂಡರುಗಳು ಭಾಗವಹಿಸಿ ಯಶಸ್ವಿಗೊಳಿಸಿದರು, ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಭಾವಚಿತ್ರದೊಂದಿಗೆ ಸಾಗಿದ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಅದ್ದೂರಿಯಾಗಿ ಗ್ರಾಮದ ಯುವಕರು ಕುಣಿದು ಕುಪ್ಪಳಿಸಿ ಅರ್ಥಪೂರ್ಣವಾಗಿ ಶ್ರೀ ಬಸವೇಶ್ವರ ಜಯಂತಿಯನ್ನು ನಡೆಸಿಕೊಟ್ಟರು, ಇದೇ ಸಂದರ್ಭದಲ್ಲಿ ವೀರಶೈವ ಸಮಾಜದ ಮುಖಂಡರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿಯವರು ಮತ್ತು ಸಂಘ-ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಿ ಯಶಸ್ವಿಗೊಳಿಸಿದರು.

ವರದಿ ಬಿ.ಎಂ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
