ಗ್ರಾಮ ಪಂಚಾಯಿತಿಗಳ ಉಪ ಚುನಾವಣೆ ಹಿನ್ನಲೆ
ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ತಾಲೂಕು/ಗ್ರಾಮ ಮಟ್ಟದ ಉಸ್ತುವಾರಿ ಸಮಿತಿ ನೇಮಿಸಿ ಡಿಸಿ ಆದೇಶ.
ಜಿಲ್ಲೆಯ ವಿವಿಧೆಡೆ ಈ ತಿಂಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿಗಳ ಉಪ ಚುನಾವಣೆ-2022 ಅನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಸಲುವಾಗಿ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಗ್ರಾಮಮಟ್ಟದಲ್ಲಿ ಉಸ್ತುವಾರಿ ಸಮಿತಿ ನೇಮಿಸಿ ಜಿಲ್ಲಾಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಆದೇಶ ಹೊರಡಿಸಿದ್ದಾರೆ.
ತಹಶೀಲ್ದಾರರ ಉಸ್ತುವಾರಿಯಲ್ಲಿ ತಾಲೂಕು ಮಟ್ಟದ ಎಂ.ಸಿ.ಸಿ ತಂಡಗಳನ್ನು ರಚಿಸಲಾಗಿದೆ.
ತಂಡದಲ್ಲಿರುವ ಅಧಿಕಾರಿಗಳ ವಿವರ: ತಾಲೂಕಾ ನೋಡಲ್ ಅಧಿಕಾರಿಯಾಗಿ ತಹಶೀಲ್ದಾರರು, ತಾಲೂಕಾ ಮೇಲ್ವಿಚಾರಕರಾಗಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ, ಸದಸ್ಯರಾಗಿ ಸಂಬಂಧಪಟ್ಟ ಸಿಪಿಐ/ಪಿಎಸ್ಐ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ತಂಡದಲ್ಲಿರುತ್ತಾರೆ.
ಸದರಿಯವರು ಚುನಾವಣಾ ನಾಮಪತ್ರ ಸಲ್ಲಿಸುವ ದಿನಾಂಕದಿಂದಲೇ ಕಾರ್ಯ ಪ್ರವೃತ್ತರಾಗಲು ಮತ್ತು ಪ್ರತಿದಿನ ಪ್ರಗತಿಯನ್ನು ಎಂ.ಸಿ.ಸಿ ಮುಖ್ಯಸ್ಥರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಎಂ.ಸಿ.ಸಿ ತಂಡದ ತಾಲೂಕು ನೋಡಲ್ ಅಧಿಕಾರಿಗಳು ಚುನಾವಣೆ ಆಯೋಗವು ನೀಡಿರುವ ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಅನುಸ್ಥಾನಗೊಳಿಸಲು ಕ್ರಮ ತೆಗೆದುಕೊಳ್ಳತಕ್ಕದ್ದು, ಮತ್ತು ಯಾವುದೇ ಉಲ್ಲಂಘನೆಯ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಿ ಈ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಒಟ್ಟಾರೆ ಕ್ರೋಢಿಕೃತ ವರದಿಯನ್ನು ತಾಲ್ಲೂಕು ಮಟ್ಟದ ಮುಖ್ಯಸ್ಥರು ಪರಿಶೀಲಿಸಿ ಯಾವುದಾದರೂ ಉಲ್ಲಂಘನೆಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಏನಾದರು ಕ್ರಮ ಕೈಗೊಳ್ಳಲು ತೊಂದರೆ ಉಂಟಾದಲ್ಲಿ ಕೂಡಲೇ ಜಿಲ್ಲಾಧಕಾರಿಗಳಿಗೆ ಹಾಗೂ ವಿಜಯನಗರದ ಜಿಲ್ಲಾ ಪೆÇಲೀಸ್ ಅಧೀಕ್ಷಕರನ್ನು ಸಂಪರ್ಕಿಸಿ ಸೂಕ್ತ ಕ್ರಮಕೈಗೊಳ್ಳವುದು ಹಾಗೂ ಪ್ರತಿದಿನ ಉಲ್ಲಂಘನೆ ಪ್ರಕರಣಗಳ ಮಾಹಿತಿಯನ್ನು ತಪ್ಪದೇ ಈ ಕಚೇರಿಗೆ ಸಲ್ಲಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ….

ವರದಿ. ಗಣೇಶ್, ಕೆ, ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
