ಇಂದು ಚಳ್ಳಕೆರೆಯಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹಾಗೂ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ನಡೆಸಿದ ಬೃಹತ್ ಪ್ರತಿಭಟನೆ ಹಾಗೂ ಸ್ವಯಂದು ಪ್ರೇರಿತ ಬಂದ್ ನಲ್ಲಿ .ಮಾನ್ಯ ಶಾಸಕರಾದ ಟಿ ರಘುಮೂರ್ತಿ ಯವರು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಮೀಸಲಾತಿ ಹೆಚ್ಚಳ ಹಾಗೂ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣಿ ಸತ್ಯಾಗ್ರಹ 100ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಚಳ್ಳಕೆರೆಯಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ
ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಚಳ್ಳಕೆರೆಯ ಡಾ.ಬಾಬು ಜಗಜೀವನ್ ರಾಂ ಪ್ರತಿಮೆ ಮುಂಭಾಗದಿಂದ ಹೊರಟ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿಯಲ್ಲಿ ಮುಕ್ತಾಯಗೊಂಡಿತು. ಬಳಿಕ ಪ್ರತಿಭಟನೆ ನಡೆಸಿ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಿಜೆಪಿ ಸರ್ಕಾರ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸದೆ ಹಾಗೂ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುವ ಮೂಲಕ ಶೋಷಿತ ವರ್ಗದವರಿಗೆ ಅನ್ಯಾಯ ಮಾಡುತ್ತಿದೆ. ಶೋಷಿತ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಈ ಕೂಡಲೇ ಮೀಸಲಾತಿ ಹೆಚ್ಚಿಸುವುದರ ಜೊತೆಗೆ ನಾಗಮೋದನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಈ ವೇಳೆ ಆಗ್ರಹಿಸಿದೆ.
ವಿವಿಧ ಜನಪರ ಸಂಘಟನೆಗಳು, ಸಂಸ್ಥೆಗಳು, ರೈತ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಮೀಸಲಾತಿಹೋರಾಟ..

ವರದಿ.ಚಕ್ರಿ ಬಸವರಾಜ್, ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
