ಹರಪನಹಳ್ಳಿ :2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪಲಿತಾಂಶದಲ್ಲಿ ಹರಪನಹಳ್ಳಿ ತಾಲ್ಲೂಕಿನಲ್ಲಿ ಶೇಕಡ 84.58 ರಷ್ಟು ಫಲಿತಾಂಶ ಕಂಡಿದೆ.

ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಯು ಒಟ್ಟು 4599 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 3890 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ,
ಪಟ್ಟಣದ ವಿ ವಿ ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ. ನಯಿನ ತಾಜ್ 625 ಅಂಕಕ್ಕೆ 623 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ,

ಮಾಚಿಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಎನ್. ಬಿ. ಪೂಜಾ 625 ಕ್ಕೆ 621 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ.

ಆರ್ ಎಸ್ ಎನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಬಿ. ತನ್ಮಯಿ ಹಾಗೂ ವಿ ವಿ ಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಎಂ ಹೆಚ್. ಸಂದೇಶ ತೃತೀಯ ಸ್ಥಾನ ಪಡೆದಿದ್ದಾರೆ. ಉತ್ತಮ ಪಲಿತಾಂಶಕ್ಕಾಗಿ ಶ್ರಮಿಸಿದ ಪ್ರೌಢಶಾಲೆ ಸಿಬ್ಬಂದಿಗಳಿಗೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರದ ಶಿಕ್ಷಣಾಧಿಕಾರಿ ಯು. ಬಸವರಾಜಪ್ಪನವರು ಅಭಿನಂದನೆಗಳು ಸೂಚಿಸಿದ್ದಾರೆ….
ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
