ವಿದ್ಯಾವಂತರಾಗಿ ಉತ್ತಮ ಜೀವನ ರೂಪಿಸಿಕೊಳ್ಳಿ:ವಿದ್ಯಾರ್ಥಿಗಳಿಗೆ
ಶಾಸಕ ಎಸ್.ವಿ.ರಾಮಚಂದ್ರ ಕಿವಿಮಾತು
ಜಗಳೂರು:ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಶಾಸಕ ಎಸ್.ವಿ.ರಾಮಚಂದ್ರ ಈ ಬಾರಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವುದರೊಂದಿಗೆ ಸಾಧನೆಗೈದಿರಿವುದು ಅತ್ಯಂತ ಸಂತಸ ತಂದಿದೆ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಮಾತನಾಡಿ ಒಟ್ಟು 93 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 90 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟು ಸರಾಸರಿ ಶೇಖಡ ತೊಬಂತ್ತೇಳರಷ್ಟು ಫಲಿತಾಂಶ ಬಂದಿದೆ ಪ್ರಾಯಶಃ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿರುವುದು ಜಗಳೂರು ತಾಲ್ಲೂಕಿನಲ್ಲೇ ಮೊದಲು ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಜಿ.ಸಂತೋಷ್ ಕುಮಾರ್ ರಾಜಸ್ವ ನಿರೀಕ್ಷಕ ಕುಬೇಂದ್ರ ನಾಯಕ್ ನಗರ ಪಾಲಿಕೆ ಸದಸ್ಯರುಗಳಾದ ಪಾಪಲಿಂಗಪ್ಪ ಓಬಳೇಶ್ ಬಿಜೆಪಿ ಮುಖಂಡ ಗ್ಯಾಸ್ ಓಬಣ್ಣ ಮುಂತಾದವರು ಉಪಸ್ಥಿತರಿದ್ದರು….

ವರದಿ.ಸಂದೀಪ್. ಎಚ್. ಎಂ. ಹೊಳೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
