ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ…!!!

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಪಿಡಿಒ ನಾರಾಯಣಪ್ಪ

ವಿಜಯನಗರ: ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಿಕೆಹಟ್ಟಿ ಗ್ರಾಮದ ಚಿನ್ನ ಹಗರಿ ಹಳ್ಳದಲ್ಲಿ ಕೂಲಿಕಾರರಿಗೆ ನರೇಗಾದಡಿ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಸೋಮವಾರ ಕೂಲಿಕಾರರಿಗೆ ಯೋಜಿಸಲಾಗಿತ್ತು. ಪ್ರಾಥಮಿಕ ಆರೋಗ್ಯ ಕೇಂದ್ರ ಹೂಡೇಂ ಪೂಜಾರಹಳ್ಳಿ ಉಪಕೇಂದ್ರ ಸಮುದಾಯ ಆರೋಗ್ಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ನರೇಗಾದಡಿ ಈ ಮೊದಲು 289ಕೂಲಿ ಹಣ ಇತ್ತು. ಈಗ 309ರೂ ಆಗಿದೆ. ಗ್ರಾಮೀಣಾ ಭಾಗದ 18 ಮೇಲ್ಪಟ್ಟ ಪ್ರತಿಯೊಬ್ಬರು ನರೇಗಾ ಯೋಜನೆಯಡಿ ಕೆಲಸ ಮಾಡುವ ಅವಕಾಶವಿದ್ದು, ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಿ ಹಾಗೆ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಕೂಲಿ ಕಾರ್ಮಿಕರಿಗೆ ಅಭಿವೃದ್ಧಿ ಅಧಿಕಾರಿ ನಾರಾಯಣಪ್ಪ ಹೇಳಿದರು.

ಇದೇ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ನಾಗೇಶ್ ಬಿ ಮಾತನಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಪ್ರತಿಯೊಬ್ಬ ಕೂಲಿಕಾರರು ಬಿಪಿ, ಸಕ್ಕರೆ ಕಾಯಿಲೆ, ಕ್ಷಯರೋಗ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿದ್ದರೆ ಕಡ್ಡಾಯವಾಗಿ ಕಾಯಿಲೆಗಳಿಗೆ ತಪಾಸಣೆ ಮಾಡಿಸಿ ಪ್ರತಿಯೊಂದು ಸೂಕ್ತವಾದ ಚಿಕಿತ್ಸೆ ಲಭ್ಯವಿದೆ. ತಮ್ಮ ಆರೋಗ್ಯವನ್ನು ಪರೀಕ್ಷೆ ಮಾಡಿ, ಸೂಕ್ತ ಚಿಕಿತ್ಸೆ ನೀಡುತ್ತೇವೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಕೂಲಿಕಾರರಿಗೆ ಅರೋಗ್ಯದ ಬಗ್ಗೆ ಮಾಹಿತಿ ನೀಡಿ ಬಿಪಿ, ಶುಗರ್ ತಪಾಸಣೆ ನಡೆಸಿ, ಸಣ್ಣ-ಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲಿಯೇ ಚಿಕಿತ್ಸೆಯನ್ನು ನೀಡಿದರು. ಇಂದು ಒಟ್ಟು ತಪಾಸಣೆ ಮಾಡಿದ ಸಂಖ್ಯೆ 200, ಮಧುಮೇಹ 200, ಅಧಿಕ ರಕ್ತದೊತ್ತಡ 200, ಹೊಸ ಮಧುಮೇಹ ಕಂಡುಬಂದ ಪ್ರಕರಣಗಳು 6, ಹೊಸ ಅಧಿಕ ರಕ್ತದೊತ್ತಡ 12 ಎಂದು ತಿಳಿಸಿದರು. ಈ ವೇಳೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಬಸಪ್ಪ, ಉಪಾಧ್ಯಕ್ಷೆ ಶ್ರೀಮತಿ ಮಲ್ಲಮ್ಮ ಸಿದ್ದಣ್ಣ, ಸದಸ್ಯರಾದ ರಾಜಣ್ಣ, ಬಿಲ್ ಕಲೆಕ್ಟರ್ ಜೆಪಿ ಪಾಲಯ್ಯ, ಕೆ.ಎಚ್.ಪಿ.ಟಿ ಸ್ವಯಂ ಸೇವಕರಾದ ಪಾಲಯ್ಯ ಕೆ.ಪಿ ಹಾಗೂ ಆಶಾ ಕಾರ್ಯಕರ್ತೆಯರಾದ ಹಂಪಮ್ಮ, ಬಸಮ್ಮ, ಗ್ರಾಮ ಕಾಯಕಮಿತ್ರ ಭವಾನಿ, ಮೇಟಿ ಗಳಾದ ಒ ಬಸವರಾಜ್, ಬಿ ಓಬಯ್ಯ, ಗ್ರಾ.ಪಂ ಸಿಬ್ಬಂದಿಗಳು, ಕಾಯಕಬಂಧುಗಳು ಹಾಗೂ ಕೂಲಿಕಾರರು ಇದ್ದರು….

 

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend