ಕಾನಹೊಸಹಳ್ಳಿ.. ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ..
ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಹೊಸಹಳ್ಳಿ ಕೆರೆಯಂಗಳದಲ್ಲಿ ಕೆರೆಯಲ್ಲಿ ಹೂಳೆತ್ತುವ ಕೂಲಿಕಾರರಿಗೆ ಹೊಸಹಳ್ಳಿ ಆರೋಗ್ಯ ಕೇಂದ್ರದಿಂದ ಕಾಮಗಾರಿಯ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶರಣಪ್ಪನವರು ಮಾತನಾಡಿ ದಿನನಿತ್ಯ ಕೆಲಸ ಮಾಡುವ ಮಹಿಳೆಯರು ಮಧ್ಯವಯಸ್ಕರು ಅರ್ಹ ವಿಕಲಚೇತನ ಕೂಲಿಕಾರರಿಗೆ ನಾನಾ ಕಾರಣಗಳಿಂದ ಆರೋಗ್ಯದ ಮೇಲೆ ವ್ಯತ್ಯಾಸ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ವತಿಯಿಂದ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಪ್ರತಿಯೊಬ್ಬರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಿ ಎಂದು ಕೆರೆಯಲ್ಲಿ ಹೂಳೆತ್ತಲು ಬಂದ ಕೂಲಿಕಾರ್ಮಿಕರಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ ನಿಂಗಪ್ಪನವರು ಮಾತನಾಡಿ ಪ್ರತಿಯೊಬ್ಬ ಕೂಲಿಕಾರರು ಬಿಪಿ ಸಕ್ಕರೆ ಕಾಯಿಲೆ ಕ್ಷಯರೋಗ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿದ್ದರೆ ಕಡ್ಡಾಯವಾಗಿ ಕಾಯಿಲೆಗಳಿಗೆ ತಪಾಸಣೆ ಮಾಡಿಸಿ ಕೊಳ್ಳಿರಿ, ಪ್ರತಿಯೊಂದು ಕಾಯಿಲೆಗೆ ಸೂಕ್ತವಾದ ಚಿಕಿತ್ಸೆ ಸ್ಥಳದಲ್ಲೇ ತಪಾಸಣೆ ಮಾಡಲಾಗುವುದು ಪ್ರತಿಯೊಬ್ಬರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಸಂದರ್ಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಯ್ಯ. ಅಭಿವೃದ್ಧಿ ಅಧಿಕಾರಿ ನಿಂಗಪ್ಪ. ಉಪಾಧ್ಯಕ್ಷ ಬೋರಯ್ಯ. ಕಾರ್ಯದರ್ಶಿ ಶರಣಪ್ಪ. ಆರೋಗ್ಯ ಇಲಾಖೆ ಸಿಬ್ಬಂದಿ. ಗ್ರಾಮ ಪಂಚಾಯತಿ ಸಿಬ್ಬಂದಿ. ಕೂಲಿ ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ಡಿ.ಎಂ.ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend