ತಾಯಕನಹಳ್ಳಿ: ನೂತನ ಜ್ಞಾನದೀಪ ನವೋದಯ ಕೋಚಿಂಗ್ ಸೆಂಟರ್ ಉದ್ಘಾಟನೆ ಸಮಾರಂಭ…!!!

ತಾಯಕನಹಳ್ಳಿ: ನೂತನ ಜ್ಞಾನದೀಪ ನವೋದಯ ಕೋಚಿಂಗ್ ಸೆಂಟರ್ ಉದ್ಘಾಟನೆ ಸಮಾರಂಭ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಸಿಂಚನ ಶಿಕ್ಷಣ ಮತ್ತು ಗ್ರಾಮೀಣ ಮಕ್ಕಳ ಆರೋಗ್ಯ ಸಂಸ್ಥೆ ವತಿಯಿಂದ ಜೂನ್-3 ಇಂದು ನೂತನವಾಗಿ ಜ್ಞಾನದೀಪ ನವೋದಯ ಕೋಚಿಂಗ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಪೂಜೆ ಸಲ್ಲಿಸುವುದರ ಮೂಲಕ ಊರಿನ ಮುಖಂಡರು ಗ್ರಾಮ ಪಂಚಾಯತಿಯ ಸದಸ್ಯರುಗಳು ವಿವಿಧ ಶಾಲೆಯ ಶಿಕ್ಷಕರು ಸೇರಿದಂತೆ ಇತರರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೋಚಿಂಗ್ ಸೆಂಟರ್ ವ್ಯವಸ್ಥಾಪಕರಾದ ಮಂಜುನಾಥ ಅವರು ಮಾತನಾಡಿ ಗ್ರಾಮೀಣ ಭಾಗದ ಮಕ್ಕಳಿಗೆ ಜೀವನ ಶೈಲಿ ಬದಲಾಗಬೇಕೆಂದರೆ ಮಕ್ಕಳಿಗೆ ನಾವು ಕೊಡುವ ಶಿಕ್ಷಣ ಬಹಳ ಮುಖ್ಯ, ಅಂತಹ ಉತ್ತಮ ಶಿಕ್ಷಣ ಮತ್ತು ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು, ಮಕ್ಕಳ ಜ್ಞಾನದ ಮಟ್ಟವನ್ನು ಹೆಚ್ಚಿಸುವಲ್ಲಿ ವಿದ್ಯಾರ್ಥಿಗಳು ವಿವಿಧ ತರಬೇತಿಗಳನ್ನು ಪಡೆದುಕೊಂಡರೆ ಜೀವನದಲ್ಲಿ ಯಶಸ್ಸನ್ನು
ಗಳಿಸಬಹುದು. ಸಣ್ಣ ಪ್ರಾಯದಿಂದಲೇ ತಮ್ಮ ಮುಂದಿನ ಜೀವನಕ್ಕೆ ಬೇಕಾಗುವ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿವಿಧ ತರಬೇತಿಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ, ಮಕ್ಕಳ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ತಾಯಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ಜ್ಞಾನ ದೀಪ ನವೋದಯ ಕೋಚಿಂಗ್ ಸೆಂಟರ್ ಅನ್ನು ಪ್ರಾರಂಭಿಸಿದ್ದೇವೆ ಇದರಲ್ಲಿ ನವೋದಯ, ಮುರಾರ್ಜಿ ದೇಸಾಯಿ, ಸೈನಿಕ, ಅಂಬೇಡ್ಕರ್, ಕಿತ್ತೂರು ರಾಣಿ ಚೆನ್ನಮ್ಮ, ಆದರ್ಶ ಶಾಲೆಯ ಪರೀಕ್ಷೆ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಕೆ.ಎನ್ ರಾಘವೇಂದ್ರ, ಮಾಜಿ ತಾ.ಪಂ ಸದಸ್ಯರಾದ ಎಚ್ ಮಾಂತಪ್ಪ, ಗ್ರಾ.ಪಂ ಸದಸ್ಯರಾದ ಕುಮಾರ್ ಬಿ, ಮಾಜಿ ಗ್ರಾ.ಪಂ ಸದಸ್ಯರಾದ ಮಲ್ಲಿಕಾರ್ಜುನ್, ಕರಿಬಸಣ್ಣ ಚಿಕ್ಕೊಬನಹಳ್ಳಿ, ಕೆಂಚಪ್ಪಲಿಂಗಪ್ಪ, ಸ.ಹಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಪಾಲಯ್ಯ, ಶಿಕ್ಷಕಿ ಕರಿಬಸಮ್ಮ, ಶ್ರೀ ಗುರು ಕನಕ ವಿದ್ಯಾ ಕೇಂದ್ರದ ವ್ಯವಸ್ಥಾಪಕರಾದ ಮಂಜುನಾಥ, ಚಂದ್ರಶೇಖರ್, ಕುಮಾರಸ್ವಾಮಿ, ಪೂಜಾರ್ ತಿಪ್ಪೇಸ್ವಾಮಿ, ಗಿರೀಶ್ ಮಾಲೀಕರು ಸಹನ ಎಂಟರ್ಪ್ರೈಸಸ್ಸ್, ಮುಖಂಡರಾದ ತಿಪ್ಪೇಸ್ವಾಮಿ, ಚಂದ್ರಶೇಖರ್, ನಾಗಭೂಷಣ್, ಸುನಿತಾ ಗುರುರಾಜ್ ಹಾಗೂ ನೂತನ ಕೋಚಿಂಗ್ ಸೆಂಟರ್ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು…

ವರದಿ.ಡಿ. ಎಂ.ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend