;

ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಅಭಿವೃದ್ಧಿಯ ಪ್ರಗತಿ ಸಾಧ್ಯ – ಸಚಿವ ಶ್ರೀರಾಮುಲು…!!!

ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಅಭಿವೃದ್ಧಿಯ ಪ್ರಗತಿ ಸಾಧ್ಯ – ಸಚಿವ ಶ್ರೀರಾಮುಲು.

ಸಿಂಧನೂರು : ಜೂನ್ 12 ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಅಭಿವೃದ್ಧಿಯ ಪ್ರಗತಿ ಸಾಧ್ಯ ಅದಕ್ಕಾಗಿಯೇ ರಾಜ್ಯದಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಸಚಿವ ಶ್ರೀರಾಮುಲು ಹೇಳಿದರು.

ತಾಲೂಕಿನ ಜವಳಗೇರಾ ಗ್ರಾಮದ ಹತ್ತಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ರಾಯಚೂರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ 75 ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 21ಕೋಟಿ ರೂ.ವೆಚ್ಚದಲ್ಲಿ 11 ಎಕರೆ 20 ಗುಂಟೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿರುವ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿ ನಂತರ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 826 ಮುರಾರ್ಜಿ ವಸತಿ ಶಾಲೆಗಳಿವೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ನೇ ಸಾಲಿನಲ್ಲಿ 15 ಸಾವಿರ ಕೋಟಿ ಅನುದಾನ ನೀಡಲಾಗುತಿದ್ದ ಅನುದಾನವನ್ನು ಮುಖ್ಯಮಂತ್ರಿಗಳು 30 ಸಾವಿರ ನೀಡಿದ್ದಾರೆ.ನಮ್ಮ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಹಂತ ಹಂತವಾಗಿ ಸಮಾಜದಲ್ಲಿ ಆರ್ಥಿಕ ಅಭಿವೃದ್ಧಿಗೆ ನಾವು ಹೆಚ್ಚು ಒತ್ತು ನೀಡುತ್ತೇವೆ. ದೇಶದ 112 ಮಹತ್ವಾಕಾಂಕ್ಷೆ ಯೋಜನೆಯಲ್ಲಿ ರಾಯಚೂರು ಜಿಲ್ಲೆಯೂ ಇದೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದೇ ನಮ್ಮ ಸರ್ಕಾರದ ಗುರಿ. ಪ್ರಸ್ತುತ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಶೇ 99.10 ರಷ್ಟು ಅಂಕ ಪಡೆದಿದ್ದಾರೆ, ಪಿ.ಯು.ಸಿ.ಯಲ್ಲಿ 100 ರಷ್ಟು ಪಲಿತಾಂಶ ಬಂದಿದೆ ವಿಧ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಲಿ ಎಂದು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ವೆಂಕಟರಾವ್ ನಾಡಗೌಡ ಅವರು ಬಡಮಕ್ಕಳಿಗಾಗಿ ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ಸುಸಜ್ಜಿತ ಕಟ್ಟಡಗಳನ್ನೋಳಗೊಂಡ ಈ ವಸತಿ ಶಾಲೆ ಊಟದ ವ್ಯವಸ್ಥೆ ,ಆಟದ ಮೈದಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲು ಕೊಠಡಿ, ಒಟ್ಟು 250 ವಿದ್ಯಾರ್ಥಿಗಳು ಅಭ್ಯಾಸ ಮಾಡಲಿದ್ದಾರೆ. ಇನ್ನೂ ವಳಬಳ್ಳಾರಿ ರಸ್ತೆಯಲ್ಲಿ ಅಲ್ಪಸಂಖ್ಯಾತ ವಸತಿ ಶಾಲೆ ನಿರ್ಮಾಣವಾಗಿದ್ದು ಶೀಘ್ರವೇ ಉದ್ಘಾಟಿಸಲಾಗುವುದು. ನಾಲ್ಕು ವಸತಿ ಶಾಲೆ ನಿರ್ಮಾಣಕ್ಕೆ ಭೂಮಿ ಖರೀದಿ ಮಾಡಲಾಗಿದ್ದು. ಶೀಘ್ರವೇ ಅಡಿಗಲ್ಲು ಹಾಕಲಾಗುವುದು.

ಶ್ರೀರಾಮುಲು ರವರು ನಮ್ಮ ಭಾಗದ ಸಚಿವರಾಗಿರುವುದರಿಂದ ಜಿಲ್ಲೆಯ ಮತ್ತು ತಾಲೂಕಿನ ಸಮಸ್ಯಗಳನ್ನು ಅರ್ಥಮಾಡಿಕೊಂಡು ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಿದ್ದಾರೆ.ಎ ಆರ್ ಟಿ ಓ ಕಚೇರಿ ಮಂಜೂರಾಗಿದ್ದು ಸಚಿವರ ಜೊತೆ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಹಣಕಾಸು ಇಲಾಖೆ ಅನುಮತಿ ಪಡೆಯುವ ಮೂಲಕ ಆದಷ್ಟು ಬೇಗನೆ ಎ ಆರ್ ಟಿ ಓ ಕಚೇರಿಯನ್ನು ಆರಂಭಿಸಿಸಲಾಗುವುದು ಎಂದು ಪ್ರಾಸ್ಥವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಚಂದ್ರುಭುಪಾಲ ನಾಡಗೌಡ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಮರೇಗೌಡ ವಿರುಪಾಪುರ, ಅಯ್ಯನಗೌಡ ಆಯನೂರು,ವೆಂಕಟೇಶ್ ನಂಜಲದಿನ್ನಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಮ್ಮ ಗಂ ಮಲ್ಲಪ್ಪ ಹುಡೆದ್, ತಹಶೀಲ್ದಾರ್ ಮಂಜುನಾಥ ಭೋಗವತಿ,ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಂದ್ರ ಜಲ್ದಾರ, ತಾಲೂಕ ಅಧಿಕಾರಿ ಶಿವಮಾನಪ್ಪ, ಪ್ರಾಂಶುಪಾಲರಾದ ವಿಶ್ವನಾಥ ಎ ಕೆ,ಸಾರಿಗೆ ಘಟಕ ವ್ಯವಸ್ಥಾಪಕ ಪ್ರಕಾಶ ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳು ಹಾಜರಿದ್ದರು…

ವರದಿ.ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend