ಇಂದು ಚಳ್ಳಕೆರೆಯ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಆಯೋಜಿಸಿದ್ದ ‘ಆರೋಗ್ಯ ತಪಾಸಣೆ ಶಿಬಿರ’ಕ್ಕೆ ಚಾಲನೆ ನೀಡಿದರು
ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಚಿತ್ರದುರ್ಗದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜಿನಪ್ಪ, ನಗರಸಭೆ ಸದಸ್ಯರಾದ ಶ್ರೀ ರಮೇಶ್ ಗೌಡ, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಶ್ರೀ ಸಮರ್ಥರಾಯ, ಕಾರ್ಮಿಕ ಇಲಾಖೆ ತಾಲ್ಲೂಕು ಅಧಿಕಾರಿಗಳಾದ ಶ್ರೀಮತಿ ಕುಸುಮ, ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಶಿವರುದ್ರಪ್ಪ, ಮುಖಂಡರಾದ ಶ್ರೀ ಕೃಷ್ಣಮೂರ್ತಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಿವಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು…

ವರದಿ.ಚಕ್ರಿ ಬಸವರಾಜ್.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
