;

ಇಟ್ಟಿಗಿ ನರೇಗಾ ಕಾಮಗಾರಿ ಸ್ಥಳದಲ್ಲಿ ನೆಡೆದ ಕಾನೂನು ಅರಿವು – ನೆರವು ಕಾರ್ಯಕ್ರಮ ವಿಜಯನಗರ ಜಿಲ್ಲೆ…!!!

ಇಟ್ಟಿಗಿ ನರೇಗಾ ಕಾಮಗಾರಿ ಸ್ಥಳದಲ್ಲಿ ನೆಡೆದ ಕಾನೂನು ಅರಿವು – ನೆರವು ಕಾರ್ಯಕ್ರಮ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕಿನ ಇಟ್ಟಿಗಿ ಗ್ರಾಮದಲ್ಲಿ 16/6/2022ರಂದು ಇಟ್ಟಿಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಟ್ಟಿಗಿ ಗ್ರಾಮದ ಹರಪನಹಳ್ಳಿ ರಸ್ತೆ ಹೊಸ ಚೆಕ್ ಡ್ಯಾಮ್ ನಲ್ಲಿ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಹಿಳಾ & ಮಕ್ಕಳ ಸ್ನೇಹಿ ಕಾನೂನು ಅರಿವು & ನೆರವು ಕಾರ್ಯಕ್ರಮವನ್ನು ಹಮ್ಮಿಕೊಂಡು ಹಿರಿಯ ವಕೀಲರಾದ ಅಟವಾಳಿಗೆ ಕೊಟ್ರೇಶ್ ರವರು ವಿಶೇಷ ಉಪನ್ಯಾಸವನ್ನು ನೀಡಿ ಕಾನೂನಿನನ್ವಯ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಇರುವ ನೆರವಿನ ಬಗ್ಗೆ ತಿಳಿಸಿದರು, ಅಜ್ಜಯ್ಯ ಕೆ ಸರ್ಕಾರಿ ವಕೀಲರು ಮಾತನಾಡಿ ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯುಮೂಲ್ಯವಾಗಿರುವುದಾಗಿದೆ ಎಂದರು. ಹೂವಿನ ಹಡಗಲಿ ತಾಲೂಕು ಉಚಿತ ಕಾನೂನು ನೆರವು ತಾಲೂಕು ವಕೀಲರ ಸಂಘ ಹಾಗೂ ತಾಲೂಕು ಆಡಳಿತ ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ನೆಡೆಯಿತು….. ಕಾರ್ಯಕ್ರಮದಲ್ಲಿ ಗ್ರಾಮ ಪಂ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ ಪಂ ಸಿಬ್ಬಂದಿ ವರ್ಗ ಹಾಗೂ ಕೂಲಿಕಾರ್ಮಿಕರು, ಕಾಯಕಬಂಧುಗಳು, ಕಾಯಕ ಮಿತ್ರರು, ನರೇಗಾ ರಾಯಭಾರಿ ಇನ್ನಿತರರು ಪಾಲ್ಗೊಂಡಿದ್ದರು.

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;