;

ಸಾರ್ವಜನಿಕರ ಸಮಸ್ಯೆ ಪರಿಹರಿಸಲು ವಿಜಯನಗರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ..!!!

ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಗುಡೇಕೋಟೆ:-ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಳ್ಳಿಗೆ ಭೇಟಿ ನೀಡಿದೆ. ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಹೇಳಿದರು.

ಅವರು ಇಂದು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿ ವ್ಯಾಪ್ತಿಯ ಅಪ್ಪಯ್ಯನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರದಿಂದ ದೂರವಿರುವ ಗ್ರಾಮೀಣ ಪ್ರದೇಶದ ಜನರು ವಾಸವಾಗಿರುವ ಸ್ಥಳಕ್ಕೆ ಅಧಿಕಾರಿಗಳು ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಿ, ಸ್ಪಂದಿಸು ಬೇಕೆಂಬ ಉದ್ದೇಶದಿಂದ ಸರ್ಕಾರವು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ.


ಸಮುದಾಯಗಳ ಸಮಸ್ಯೆ ಹಾಗೂ ವೈಯಕ್ತಿಕ ಸಮಸ್ಯೆಗಳು ಸೇರಿದಂತೆ ಸಾವಿರಾರು ಅರ್ಜಿಗಳು ಬಂದಿದ್ದು. ಮುಖ್ಯವಾಗಿ, ಸ್ಮಶಾನಕ್ಕೆ ಜಾಗ ಕಾಯ್ದಿರಿಸುವುದು, ರಸ್ತೆ, ಮಹಿಳೆಯರಿಗೆ ಹಾಸ್ಟೆಲ್. ರೈತರ ಜಮೀನುಗಳ ಸಮಸ್ಯೆಗಳು ಸೇರಿದಂತೆ ಮತ್ತಿತರ ಆಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಕೋರಿರುವ ಅರ್ಜಿ ಅಹವಾಲುಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಇವುಗಳನ್ನು ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ ಕಾನೂನು ವ್ಯಾಪ್ತಿಯಲ್ಲಿ ಸ್ಥಳದಲ್ಲಿಯೇ ಬಗೆಹರಿಸಲಾಗುವುದು ಎಂದರು.
ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಗ್ರಾಮೀಣ ಭಾಗದ ಜನರು ಸೇವೆ ಪಡೆಯಲು ಅಲೆದಾಡುವುದನ್ನು ತಪ್ಪಿಸಲು ಅಧಿಕಾರಿಗಳ ತಂಡ ಪ್ರತಿ ತಿಂಗಳು ಮೂರನೇ ಶನಿವಾರ ಆಯ್ದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುತ್ತಿದೆ. ಗ್ರಾಮಸ್ಥರು ಸಕ್ರಿಯವಾಗಿ ಪಾರದರ್ಶಕವಾಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾವುಗಳು ಭಾಗವಹಿಸಬೇಕು ಎಂದರು. ಇಲ್ಲಿಯವರೆಗೂ ಜಿಲ್ಲೆಯಲ್ಲಿ ನಡೆದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳು ವಿಲೇವಾರಿ ಮಾಡಲಾಗಿದೆ ಬಹಳಷ್ಟು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ ಎಂದರು.

ವಿವಿಧ ಇಲಾಖೆಯ ವಸ್ತುಪ್ರದರ್ಶನ ವಿಕ್ಷಿಸಿದ ಡಿಸಿ

ಕೂಡ್ಲಿಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿ ವತಿಯಿಂದ ಮಕ್ಕಳಲ್ಲಿ ಪೋಷಕಾಂಶ ಹೆಚ್ಚಿಸಲು ಸೇವಿಸುವ ಆಹಾರ ಪದಾರ್ಥಗಳನ್ನು ಅನಾವರಣಗೊಳಿಸಲಾಗಿತ್ತು.

ಅಂಗನವಾಡಿಯಿಂದ ನೀಡಲಾಗುವ ಆಹಾರಧಾನ್ಯ ಗಳಿಂದ ಮಕ್ಕಳಿಗೆ ರುಚಿಕರ ತಿನಿಸು ಮಾಡಬಹುದೆಂದು ತಿಳಿಸುವ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿತ್ತು.

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ಮಧುಮೇಹ ಹಾಗೂ ಕಣ್ಣು ಪರೀಕ್ಷೆ ರಕ್ತದ ಒತ್ತಡ ಪರೀಕ್ಷೆ ಮಾಡಲಾಯಿತು. ಪ್ರಾಸ್ತಾವಿಕವಾಗಿ ಕೂಡ್ಲಿಗಿ ತಹಶೀಲ್ದಾರ್ ಟಿ.ಜಗದೀಶ್ ರವರು ಮಾತನಾಡಿದರು.

ಸಲ್ಲಿಕೆಯಾದ ಅರ್ಜಿಗಳ ವಿವರ
ಅಪ್ಪೇನಹಳ್ಳಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ 222.ಆಹಾರ-23 ಆರ್ಡಿಪಿಆರ್-18 ಪಶು-01 ಸೇರಿ ಇತರೆ ಇಲಾಖೆಯ ಒಟ್ಟು 209 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು,ಆ ಪೈಕಿ 37 ಜನರಿಗೆ ವಿವಿಧ ಪಿಂಚಣಿ ಆದೇಶ ಪತ್ರವನ್ನು ಸ್ಥಳದಲ್ಲೇ ವಿತರಿಸಲಾಯಿತು.ಬೆಳಿಗ್ಗೆ 10ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ ಮಧ್ಯಾಹ್ನ 02 ಗಂಟೆಗೆ ಡಿಸಿ ಆಗಮಿಸಿದ್ದರಿಂದ ಸ್ವಲ್ಪ ವಿಳಂಬವಾಯಿತು ಆದರೂ ಜನರು ಉತ್ಸಾಹದಿಂದ ಜಿಲ್ಲಾಧಿಕಾರಿ ಬರುವುದನ್ನೇ ಕಾಯುತ್ತಿರುವುದು ಕಂಡು ಬಂತು.


ಈ ಸಂದರ್ಭದಲ್ಲಿ ವಿಜಯನಗರ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರ.ಡಿಹೆಚ್ಒ ಸಲೀಂ.ಸಮಾಜಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಾದ ಸತೀಶ್.ಆರ್ಟಿಓ ವಸಂತ ಚೌಹಾಣ್.ಡಿಡಿಎಲ್ಆರ್ ಕುಸುಮಲತಾ.ಸಾರ್ವಜನಿಕ ಶಿಕ್ಷಣ ಇಲಾಖೆ ಕೋಟ್ರೇಶ್.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವೀರನಗೌಡ.ಗ್ರಾ ಪಂ ಉಪಾಧ್ಯಕ್ಷರಾದ ಲಕ್ಷ್ಮೀದೇವಿ ಅಂಜಿನಪ್ಪ.ಬಿಇಓ ಯುವರಾಜ್ ನಾಯ್ಕ್.ಗಾದಿಲಿಂಗಪ್ಪ ಪ/ಪಂ ವರ್ಗಗಳ ಇಲಾಖೆ.ಟಿಹೆಚ್ಓ ಎಸ್.ಪಿ.ಪ್ರದೀಪ್.ಆರ್ಎಫ್ಓ ರೇಣುಕಮ್ಮ.ಶಾಸಕರ ಆಪ್ತ ಸಹಾಯಕರಾದ ಶ್ರೀಕಾಂತ್.ಸಿಡಿಪಿಓ ನಾಗನಗೌಡ.ಗುಡೇಕೋಟೆ ಉಪತಹಸೀಲ್ದಾರ್ ಕೋಟ್ರಮ್ಮ.ಕಂದಾಯ ನಿರೀಕ್ಷಕರಾದ ಯಜಮಾನಪ್ಪ.ಗ್ರಾಪಂ ಕಾರ್ಯದರ್ಶಿ ಹನುಮಂತಪ್ಪ.ಕಾರ್ಯಕ್ರಮದಲ್ಲಿ ಸ್ವಾಗತ ಶರಣಪ್ಪ ಶಿಕ್ಷಕರು ನೇರವೇರಿಸಿದರು.ಪ್ರಾರ್ಥನೆ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ನೇರವೇರಿಸಿದರು.ಗುಡೇಕೋಟೆ ಪಿಎಸ್ಐ ಶಾಂತಮೂರ್ತಿ ಸೇರಿದಂತೆ ಇನ್ನೂ ಅನೇಕ ತಾಲೂಕು ಮಟ್ಟದ ಅಧಿಕಾರಿಗಳು.ಎಲ್ಲಾ ಗ್ರಾಮಗಳ ಸ್ಥಳಿಯ ಜನಪ್ರತಿನಿಧಿಗಳು.ಗ್ರಾಮಸ್ಥರು ಉಪಸ್ಥಿತರಿದ್ದರು…

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend