;

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ…!!!

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ.

ಸಿಂಧನೂರು :ಜೂನ್ 20. ಸೋನಿಯಾ ಗಾಂಧೀಜಿ ಹಾಗೂ ರಾಹುಲ್ ಗಾಂಧೀಜಿ ಅವರಿಗೆ ಇಡಿ,ಸಿಬಿಐ, ತನಿಖಾ ಸಂಸ್ಥೆಗಳ ಮುಖಾಂತರ ಕಿರುಕುಳ ನೀಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಸಿಂಧನೂರಿನ ಎ.ಪಿ.ಎಂ.ಸಿ. ಗಣೇಶ ದೇವಸ್ಥಾನದಿಂದ ಗಾಂಧಿ ವೃತ್ತದ ವರೆಗೆ ಬೃಹತ್ ಪ್ರತಿಭಟನೆಯ ಮೂಲಕ ಮೆರವಣಿಗೆ ಹಮ್ಮಿಕೊಂಡು ಹಾಗೂ ಮಾನವ ಸರಪಳಿ ರಚನೆ ಮಾಡಿ ರಸ್ತೆ ರೋಕ್ ಮಾಡಿ ತಹಸೀಲ್ದಾರ ಕಚೇರಿಯನ್ನು ಮುತ್ತಿಗೆ ಹಾಕಲು ಪ್ರಯತ್ನಿಸಲಾಯಿತು. ಈ ವೇಳೆ ಬಸನಗೌಡ ಬಾದರ್ಲಿಯವರನ್ನು ಹಾಗೂ ಮುಖಂಡರನ್ನು, ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ 11 ಗಂಟೆಯಿಂದ ರಸ್ತೆ ತಡೆ ನಡೆಸಿ ಧರಣಿ ಮಾಡುವ ಮೂಲಕ ಕೇಂದ್ರ ಸರ್ಕಾರ ತನಿಖಾ ಸಂಸ್ಥೆ ಗಳನ್ನು ದುರುಪಯೋಗ ಪಡಿಸಿಕೊಂಡು ನಮ್ಮ ಮುಖಂಡರಿಗೆ ಕಿರುಕುಳ ನೀಡುವುದನ್ನು ಬಿಡಬೇಕು. ರಾಹುಲ್ ಗಾಂಧಿ, ಸೋನಿಯಾಗಾಂಧಿಯನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡು ಅವರನ್ನು ಜೈಲಿಗೆ ಹಾಕಲು ಪ್ರಯತ್ನಿದರೆ ದೇಶದಾದ್ಯಂತ ಇರುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಎಲ್ಲರೂ ಜೈಲಿಗೆ ಹೋಗಲು ಸಿದ್ದ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಶಿವಕುಮಾರ ಜವಳಿ,ವೆಂಕಟೇಶ ನಾಯಕ,ಎಚ್ ಎನ್ ಬಡಿಗೇರ್,ಶರಣಯ್ಯಕೋಟೆ, ಖಾಜಾ ಹುಸೇನ್ ,ರೌಡಕುಂದ,ಸೋಮನ ಗೌಡ ಬಾದರ್ಲಿ,ಅಮರೇಶ ಗಿರಿಜಾಲಿ,ಯುನುಸ್ ಪಾಷ, ಖಾಜಾ ಬಳಗಾನೂರು,ಪ್ರಭು ದೇವರಗುಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಹಿರಿಯರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಿಪಿಐ ಉಮೇಶ ಕಾಂಬ್ಳೆ, ಪಿಎಸ್ ಐ ಸೌಮ್ಯ ಹಿರೇಮಠ, ಯರಿಯಪ್ಪ, ಚಂದ್ರಪ್ಪ, ಬಸವರಾಜ ಎಚ್,ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೋಲಿಸ್ ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;