;

ಕುಡಿಯುವ ನೀರು ಮತ್ತು ನರೇಗಾ ಯೋಜನೆ ಕುರಿತು ಪ್ರಗತಿ ಪರಿಶೀಲನೆ ಸಭೆ…!!!

ಕುಡಿಯುವ ನೀರು ಮತ್ತು ನರೇಗಾ ಯೋಜನೆ ಕುರಿತು ಪ್ರಗತಿ ಪರಿಶೀಲನೆ ಸಭೆ.

ಸಿಂಧನೂರು : ಜೂನ್ 20. ಕಾಲುವೆಗಳಿಗೆ ನೀರು ಬಿಡುವುದರ ಒಳಗಾಗಿ ರೈತರ ಹೊಲಗಳಿಗೆ ಹೋಗುವ ಕಾಲುವೆಗಳನ್ನು ತೆಗೆಯಲು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅವಕಾಶ ಮಾಡಿಕೊಡುವ ಜವಾಬ್ದಾರಿ ಪಿಡಿಓ ಮತ್ತು ಜೆಇ ಗಳದ್ದು ಎಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಕುಡಿಯುವ ನೀರು ಮತ್ತು ನರೇಗಾ ಯೋಜನೆ ಕುರಿತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಅನೇಕ ಗ್ರಾಮಗಳಲ್ಲಿ ಸಮಸ್ಯೆಗಳಿವೆ. ಈ ಬಗ್ಗೆ ನಡೆದ ಪರಿಶೀಲನೆ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಸೂಕ್ತ ರೀತಿಯಲ್ಲಿ ಪಟ್ಟಿ ಮಾಡಿ ದಾಖಲೆಗಳನ್ನು ನೀಡುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

2 ಅಥವಾ 3 ದಿನಗಳಲ್ಲಿ ಎಷ್ಟಿಮೇಟ್ ತಯಾರು ಮಾಡಿ 25% ರೈತರ ಹೊಲಕ್ಕೆ ಹೋಗುವ ರಸ್ತೆಗಳನ್ನು ಮಾಡಿಸಬೇಕು,ಸರಕಾರ ಕೋಟಿಗಟ್ಟಲೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಗ್ರಾಮೀಣ ಪ್ರದೇಶದ ಸಮಸ್ಯೆಗಳು ಬಗೆಹರಿಯುತ್ತಿಲ್ಲ.ಜನರು ನಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಅಧಿಕಾರಿಗಳು ಹಣವನ್ನು ಸೂಕ್ತವಾಗಿ ಬಳಕೆ ಮಾಡುತ್ತಿಲ್ಲವೆಂದು ಶಾಸಕ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದರು.

ಒಳಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಓ ರವರನ್ನು ನೀವು ಯಾವ ಯಾವ ಕೆಲಸ ಮಾಡಿಸಿದ್ದಿರಿ ದಾಖಲೆ ಸಹಿತ ಮಾಹಿತಿ ಕೊಡಿ ಎಂದಾಗ ಶಾಸಕರು ಕೇಳಿದ ಪ್ರಶ್ನೆಗೆ ತಡವರಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ದಾಖಲೆ ನಿಡದಿದ್ದಕ್ಕೆ ಕೋಪಗೊಂಡ ಶಾಸಕರು ಸರಿಯಾದ ಮಾಹಿತಿ ಕೊಡದೇ ನಮ್ಮನ್ನು ಗೊಂದಲಕ್ಕೆಯಿಡು ಮಾಡಬೇಡಿರಿ ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್, ಎ ಇ ಪ್ರಕಾಶ್‌, ಗ್ರಾಮ ಪಂಚಾಯತ್ ಪಿಡಿಓಗಳು, ಜೆಇ ಗಳು ಇದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;