ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ…!!!

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ಬಯಲು ತುಂಬರಗುದ್ದಿ ಗ್ರಾಮದ ಶ್ರೀ ದುರ್ಗಾಂಬಿಕ ದೇವಸ್ಥಾನದ ಹತ್ತಿರ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಹಮಿಕೊಳ್ಳಲಾಗಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಹಗರಿಬೊಮ್ಮನಹಳ್ಳಿಯ ಬಿ.ಎಂ.ಡಿ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಿಎಂಡಿ ಆಸ್ಪತ್ರೆಯ ವ್ಯವಸ್ಥಾಪಕ ಕನ್ನನಾಯಕನಹಟ್ಟಿ ಪ್ರದೀಪ್ ಪಾಟೀಲ ಮಾತನಾಡಿ, ಕಾರ್ಮಿಕರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಎಚ್ಚರಿಕೆ ವಹಿಸಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಪರೀಕ್ಷೆಗೆ ಒಳಪಡಬೇಕು ಎಂದರು. ಕಾರ್ಮಿಕರ ಆರೋಗ್ಯ ತಪಾಸಣೆ 100ಕ್ಕೂ ಹೆಚ್ಚು ಕಾರ್ಮಿಕರಿಗೆ ಕಿಡ್ನಿ, ಥೈರಾಯ್ಡ್ ಎಚ್‌ಐವಿ, ಮಧುಮೇಹ, ರಕ್ತದೊತ್ತಡ, ಕಣ್ಣಿನ ಪರೀಕ್ಷೆ ಸೇರಿ ಇತರೆ ರಕ್ತ ಪರೀಕ್ಷೆಗಳನ್ನು ಮಾಡಲಾಯಿತು. ಇದೆ ವೇಳೆ ಬಿಎಂಡಿ ಆಸ್ಪತ್ರೆಯ ಡಾ ಬಸವರಾಜ, ಶ್ರೀಕಾಂತ್, ಡಾ.ಎಂ ಕವಿತಾ, ರಾಜಶೇಖರ ಹಾಗೂ ಸಿಬ್ಬಂದಿ ತಪಾಸಣೆ ಮಾಡಿದರು. ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಕೆ.ಆರ್ ದುರುಗಪ್ಪ, ಉಪಾಧ್ಯಕ್ಷೆ ಸಿದ್ದಮ್ಮ ಹಾಗೂ ಅಬ್ಬಯ್ಯನಾಯ್ಡು ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಎಚ್.ಹನುಮಂತಪ್ಪ, ಗೌರವಾಧ್ಯಕ್ಷ ಚನ್ನಬಸಪ್ಪ, ಉಪಾಧ್ಯಕ್ಷ ರಾಘವೇಂದ್ರ, ನಾಗರಾಜ್ ಕಾರ್ಯದರ್ಶಿ ಬಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು…

ವರದಿ. ವಿರೇಶ್. ಕೆ. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend