ಕಾನಹೊಸಹಳ್ಳಿ :- ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿದ್ದಾಪುರ ಗ್ರಾಮದ ಶಿವಕುಮಾರ (21) ತಂದೆ ಶಾಂತಕುಮಾರ. ಈತನಿಗೆ ಶುಕ್ರವಾರ ಸಂಜೆ ಎದೆನೋವು ಕಾಣಿಸಿಕೊಂಡು, ಚಿಕಿತ್ಸೆಗಾಗಿ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಶುಕ್ರವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಶಿವಕುಮಾರನು ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದು, ತಂದೆ-ತಾಯಿ ಹಾಗೂ ಬಂಧು-ಬಳಗ, ಮಿತ್ರರನ್ನು ಬಿಟ್ಟು ಅಗಲಿದ್ದಾನೆ. ಈತನ ಅಗಲಿಕೆಗೆ ಅಪಾರ ಬಂಧು-ಬಳಗ. ಈತನ ಶಿಕ್ಷಕರು ಸ್ನೇಹಿತರು ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದ್ದಾರೆ.
ಶಿವಕುಮಾರ್ ನ ಅಂತ್ಯಕ್ರಿಯೆ ಈ ದಿನ ಶನಿವಾರ 23.7.2022 ರಂದು ಮಧ್ಯಾಹ್ನ 2 ಗಂಟೆಗೆ ಸಿದ್ಧಾಪುರದ ರುದ್ರಭೂಮಿಯಲ್ಲಿ ಜರುಗಿತು…

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
