ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಆದೇಶ
ಬಳ್ಳಾರಿ ಜಿಲ್ಲೆಯಾದ್ಯಾಂತ ಜು.31ರಿಂದ ಆ.09ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜು.31ರಿಂದ ಆ.09ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ನಿಷೇಧಿಸಿ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೋರಿದ್ದು, ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು,ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಮತ್ತು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೆಲ ಗ್ರಾಮಗಳಲ್ಲಿ ಮೊಹರಂ ಹಬ್ಬದ ಆಚರಣೆ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮೋಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳಿವು: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿನ ಮಹಾನಂದಿಕೊಟ್ಟಂ ಒಳಗಡೆ ಹಾಗೂ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆ. ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡಗೋಳ, ಅರಳಿಗನೂರು ಗ್ರಾಮಗಳು. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು ಗ್ರಾಮ ಹಾಗೂ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಂ.15 ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
*ನಿಷೇಧಿಸಲಾದ ಚಟುವಟಿಕೆಗಳು: ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಎ)ರ ಅಡಿಯಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುವನ್ನು ಒಯ್ಯುವುದು. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಬಿ)ರ ಅಡಿಯಲ್ಲಿ ಯಾವುದೇ ದಾಹಕ(ನಾಶಕಾರಿ) ಪದಾರ್ಥ ಇಲ್ಲವೇ ಸ್ಪೋಟಕ ವಸ್ತು ಒಯ್ಯುವುದು. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಡಿ)ರ ಅಡಿಯಲ್ಲಿ ಯಾವುದೇ ವ್ಯಕ್ತಿಗಳ ಭಾವ ಚಿತ್ರಗಳನ್ನು ಅವಮಾನಕಾರ ರೀತಿಯಲ್ಲಿ ಪ್ರದರ್ಶಿಸಬಾರದು. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಇ)ರ ಅಡಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದನ್ನು, ಪದ ಹಾಡುವುದನ್ನು, ವಾದ್ಯ ಬಾರಿಸುವುದನ್ನು, ವ್ಯಾಖ್ಯಾನ ಕೊಡುವುದನ್ನು, ಸನ್ನೆ ಪ್ರದರ್ಶನವನ್ನು, ಆಫೀಸರ ಅಭಿಪ್ರಾಯದಲ್ಲಿ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ತಯಾರಿ ಪ್ರದರ್ಶನ ಅಥವಾ ಪ್ರಸಾರವನ್ನು ಪ್ರತಿಬಂಧಿಸುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದು.
ಈ ಪ್ರತಿಬಂಧಕ ಆಜ್ಞೆಗೆ ವಿರುದ್ಧವಾಗಿ ಯಾರೊಬ್ಬರು ವರ್ತಿಸಿದರೆ, ಅವರು ಯಾವುದೇ ಪೊಲೀಸ್ ಅಧಿಕಾರಿಗಳಿಂದ ಇಂತಹ ವಸ್ತು ವಶ ಪಡಿಸಿಕೊಳ್ಳಲು ಪಾತ್ರರಾಗುವವರು ಹಾಗೂ ಈ ರೀತಿ ಪಡೆಯಲ್ಪಟ್ಟ ಪದಾರ್ಥ ಸರ್ಕಾರಕ್ಕೆ ಜಮಾ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ…

ವರದಿ. ವಿರೇಶ್. ಸಿರಿಗುಪ್ಪ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
