;

ನಿವೇಶನ ಹಾಗೂ ಪಿಂಚಣಿ ಸೌಲಭ್ಯಕ್ಕೆ ರಾಜ್ಯ ವ್ಯಾಪಿ ಹೋರಾಟ!!!

ನಿವೇಶನ ಹಾಗೂ ಪಿಂಚಣಿ ಸೌಲಭ್ಯಕ್ಕೆ ರಾಜ್ಯ ವ್ಯಾಪಿ ಹೋರಾಟ!!! ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ವತಿಯಿಂದ ದಿನಾಂಕ 7-8-22ರ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿಜಯನಗರ ಜಿಲ್ಲೆಯ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನ ಸಂಘದಿಂದ ದೇವದಾಸಿ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ನಿವೇಶನ ಹಾಗೂ ಪಿಂಚಣಿ ಸೌಲಭ್ಯಕ್ಕಾಗಿ ಒತ್ತಾಯಿಸಿ ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಹಾಲಪ್ಪ ಆಚಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದು ವಿಷಾಧಕರ ಸಂಗತಿ ಎಂದು ರಾಜ್ಯ ದೇವದಾಸಿ ಮಹಿಳಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಬಿ ಮಾಳಮ್ಮನವರು ಸುದ್ದಿಗಾರರೊಂದಿಗೆ ಮಾತನಾಡಿ ದೇವದಾಸಿ ಮಹಿಳೆಯರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯ ವ್ಯಾಪ್ತಿಯಲ್ಲಿ ಮುಷ್ಕರ ನಡೆಸುವುದಾಗಿ ತಿಳಿಸಿದರು ಇದೇ ಸಂದರ್ಭದಲ್ಲಿ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯ ಅಧ್ಯಕ್ಷೆಯಾದ ಟಿ .ರೇಣುಕಮ್ಮರವರು ಮಾತನಾಡಿ ಸರ್ಕಾರ ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ದೇವದಾಸಿ ಮಹಿಳೆಯರಿಗೆ ನಿವೇಶನ ಹಾಗೂ ಪಿಂಚಣಿ ಸೌಲಭ್ಯವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಮತ್ತು ರಾಜ್ಯ ಉಪಾಧ್ಯಕ್ಷೆ ನಾಗರತ್ನಮ್ಮನವರು ಮಾತನಾಡಿ ನಮಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಸರಿಯಾಗಿ ದೊರಕುವಂತೆ ಮಾಡಲು ಸರ್ಕಾರ ಸೂಚನೆ ನೀಡಬೇಕು ಎಂದು ತಿಳಿಸಿದರು,ಹಾಗೂ ಇದೇ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ರಾಘವೇಂದ್ರ ಗುನ್ನಳ್ಳಿ ಮತ್ತು ಹರಪನಹಳ್ಳಿ ತಾಲೂಕು ಅಧ್ಯಕ್ಷೆ ಈರಮ್ಮ, ಕೆ ಮಂಜುಳಾ, ಹಗರಿಬೊಮ್ಮನಹಳ್ಳಿ ತಾಲೂಕು ಅಧ್ಯಕ್ಷೆ ಬಿ ಮೈಲಮ್ಮ ಕೆ ಅಂಜಿನಮ್ಮ ಮತ್ತು ಕೂಡ್ಲಿಗಿ ತಾಲೂಕು ಅಧ್ಯಕ್ಷೆ ದೇವಮ್ಮ, ಹೊಸಪೇಟೆ ತಾಲೂಕು ಅಧ್ಯಕ್ಷೆ ಎಲ್ಲಮ್ಮ ಉಪಸ್ಥಿತರಿದ್ದರುಇದೇ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ರಾಘವೇಂದ್ರ ಗುನ್ನಳ್ಳಿ ಮತ್ತು ಹರಪನಹಳ್ಳಿ ತಾಲೂಕು ಅಧ್ಯಕ್ಷೆ ಈರಮ್ಮ, ಕೆ ಮಂಜುಳಾ, ಹಗರಿಬೊಮ್ಮನಹಳ್ಳಿ ತಾಲೂಕು ಅಧ್ಯಕ್ಷೆ ಬಿ ಮೈಲಮ್ಮ ಕೆ ಅಂಜಿನಮ್ಮ ಮತ್ತು ಕೂಡ್ಲಿಗಿ ತಾಲೂಕು ಅಧ್ಯಕ್ಷೆ ದೇವಮ್ಮ, ಹೊಸಪೇಟೆ ತಾಲೂಕು ಅಧ್ಯಕ್ಷೆ ಎಲ್ಲಮ್ಮ ಉಪಸ್ಥಿತರಿದ್ದರು…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;