ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ…!!!

ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ

ಕೂಡ್ಲಿಗಿ:
ಒಂದರಿಂದ ಹತ್ತೊಂಬತ್ತು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ಜಂತುಹುಳು ಮಾತ್ರೆಗಳನ್ನು ತಪ್ಪದೇ ಸೇವಿಸಬೇಕು ಎಂದು ಟಿಎಚ್ಒ ಎಸ್.ಪಿ.ಪ್ರದೀಪ್ ಕುಮಾರ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ತಾಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ,ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತಾನಾಡಿದರು. ಸರಿ ಸುಮಾರು ಶೇ. 68ರಷ್ಟು ಮಕ್ಕಳಲ್ಲಿ ಈ ಹೊಟ್ಟೆ ಹುಳುಗಳ ಬಾಧೆ ಇರಬಹುದು ಎಂದು ಅಂದಾಜಿಸಲಾಗಿದೆ. ಮನುಷ್ಯನ, ಮಕ್ಕಳ ಕರುಳಿನಲ್ಲಿರುವ ಈ ಕೆಲವು ಜಂತುಗಳು ಮನುಷ್ಯನ ಆಹಾರ, ರಕ್ತ ಹಂಚಿಕೊಳ್ಳುವುದರಿಂದ ಆ ವ್ಯಕ್ತಿಯಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ನಿತ್ರಾಣ ಉಂಟಾಗಿ ಆರ್ಥಿಕ ಗಳಿಕೆಯಲ್ಲಿ ಹಿನ್ನಡೆ ಆಗಬಹುದು. ಮಕ್ಕಳಲ್ಲಿ ಹುಳಗಳ ಬಾಧೆಯಿಂದ ರಕ್ತಹೀನತೆ ಹಾಗೂ ಅವರ ಭೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳಬಹುದು. ಅವರ ಬುದ್ಧಿಶಕ್ತಿ ಕಡಿಮೆಯಾಗಬಹುದು. ಆದ್ದರಿಂದ ಕಲಿಕೆಯಲ್ಲಿ ಹಿಂದೆ ಬೀಳಬಹುದು.ಆದ್ದರಿಂದ ಈ ವರ್ಷ ಆಗಸ್ಟ್‌ 10ರಂದು 1ರಿಂದ 19 ವರ್ಷ ವಯಸ್ಸಿನ ಎಲ್ಲ ಮಕ್ಕಳು ಹಾಗೂ ಹದಿಹರೆಯದವರಿಗೆ ಆರೋಗ್ಯ ಕಾರ್ಯಕರ್ತರು, ಶಾಲಾ ಶಿಕ್ಷಕರು ಮತ್ತುಅಂಗನವಾಡಿ ಕಾರ್ಯಕರ್ತೆಯರು ಜಂತು ಹುಳ ನಿವಾರಣೆಗಾಗಿ, ವಯಸ್ಸಿಗೆ ಅನುಗುಣವಾಗಿ ಸೂಕ್ತ ಪ್ರಮಾಣದ ಡೋಸೇಜ್‌ ಪ್ರಕಾರ ಅಲ್ಬೆಂಡಜೋಲ್‌ ಮಾತ್ರೆಯನ್ನು ಉಚಿತವಾಗಿ ನೀಡಲಿದ್ದಾರೆ.ಪೋಷಕರು ತಪ್ಪದೆ ತಮ್ಮ ಮಕ್ಕಳಿಗೆ ಮಾತ್ರೆಗಳನ್ನು ನೀಡಬೇಕು ಎಂದು‌ ಕೋರಿದರು.ಒಂದು ಡೋಸ್‌ ಅಲ್ಬೆಂಡಜೋಲ್‌ 400 ಎಂಜಿ ಮಾತ್ರೆ ಮನುಷ್ಯನ ಕರುಳಿನಲ್ಲಿರುವ ಈ ಎಲ್ಲ ಹುಳುಗಳನ್ನು ನಿರ್ಮೂಲನೆ ಮಾಡುತ್ತದೆ. ಒಂದರಿಂದ ಎರಡು ವರ್ಷದ ಮಕ್ಕಳಿಗೆ ಕೇವಲ ಅರ್ಧ ಮಾತ್ರೆಯನ್ನು ನೀಡಬೇಕು ಹಾಗೂ ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಒಂದು ಪೂರ್ತಿ ಮಾತ್ರೆಯನ್ನು ನೀಡಬೇಕು. ಮೂರು ವರ್ಷದವರೆಗಿನ ಮಕ್ಕಳಿಗೆ ಮಾತ್ರೆಯನ್ನು ಪುಡಿ ಮಾಡಿ ಶುದ್ಧವಾದ ನೀರನಲ್ಲಿ ಸೇರಿಸಿ ಕುಡಿಸುವುದು. ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಮಾತ್ರೆಯನ್ನು ಚೀಪಿ ತಿನ್ನಿಸುವುದು.ಈ ಮಾತ್ರೆಯನ್ನು ಖಾಲಿ ಹೊಟ್ಟೆಯಲ್ಲಿ ಕೂಡ ತೆಗೆದುಕೊಳ್ಳಬಹುದು.
ಈ ಅಲ್ಬೆಂಡಜೋಲ್‌ ಮಾತ್ರೆ ಸಾಮಾನ್ಯವಾಗಿ ಕರುಳಿನಲ್ಲಿರುವ ಎಲ್ಲ ತರಹದ ಹುಳುಗಳನ್ನು ಸಾಯಿಸುತ್ತದೆ ಎಂದು ತಿಳಿಸಿದರು. ಪಪಂ ಅಧ್ಯಕ್ಷೆ ಎಂ.ಶಾರದಬಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸೂತಿ ತಜ್ಞ ಡಾ.ನಾಗರಾಜ್, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಕೆ.ಸುನೀತ,ಕಿರಿಯ ಮಹಿಳಾ ಆರೋಗ್ಯ ಸಹಾಯಕಿರಾದ ಪಿ.ಬಿ.ಗಿರಿಜಾ,ಭವ್ಯ,ಆಪ್ತ ಸಮಾಲೋಚಕ ಓಬಣ್ಣ ಆರೋಗ್ಯ ಸಿಬ್ಬಂದಿ ಹಾಗೂ ಪೋಷಕರು,ಮಕ್ಕಳು ಇದ್ದರು…

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend