75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ:ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಪೂರ್ವಸಿದ್ಧತಾ ಸಭೆ
ಬಳ್ಳಾರಿ, 75ನೇ ಸ್ವಾತಂತ್ರ್ಯ ಅಮೃತಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಪೂರ್ವಸಿದ್ಧತಾ ಸಭೆ ನಡೆಸಿದರು.
ಹರ್ ಘರ್ ತಿರಂಗಾ ಅಭಿಯಾನದ ಸಿದ್ಧತೆಗಳು, ಆ.13ರಿಂದ ಆ.15ರವರೆಗೆ ವೈವಿಧ್ಯಮಯವಾಗಿ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಉದ್ದೇಶಿಸಿರುವ ಇದುವರೆಗಿನ ಪ್ರಗತಿ ಸೇರಿದಂತೆ ಇನ್ನೀತರ ಸಿದ್ಧತೆಗಳ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು ಅಗತ್ಯ ಸಲಹೆ-ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಎಡಿಸಿ ಪಿ.ಎಸ್.ಮಂಜುನಾಥ,ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ವರದಿ.ವಿರೇಶ್, ಎಚ್, ಸಿರಿಗುಪ್ಪ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
