ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮಪಂಚಾಯಿತಿಯಲ್ಲಿ 75ನೇ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ.

ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು 75 ನೇ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ಈ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಮಹಾಂತೇಶಯ್ಯ ರವರು ಮುಂದೆ ಬರುವ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪ್ರತಿಯೊಬ್ಬ ಮನೆಯ ಮೇಲೆ ಧ್ವಜ ಆರಿಸುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಸರ್ವ ಸದಸ್ಯರುಗಳಿಗೆ ಹಾಗೂ ಶಾಲೆಯ ಶಿಕ್ಷಕರುಗಳಿಗೆ ಆಶಾ ಕಾರ್ಯಕರ್ತರಿಗೆ ಅಂಗನವಾಡಿ ಕಾರ್ಯಕರ್ತರಿಗೆ ಸಮಾಜಸೇವಕರಿಗೆ ಇವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಚನ್ನಬಸಮ್ಮ ಬಸಣ್ಣ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ತಿಪ್ಪಮ್ಮ ಗೊಂಚಿಗರ್ ನಾಗರಾಜ್ ಹಾಗೂ ಗ್ರಾಮ ಪಂಚಾಯಿತಿ ಎಲ್ಲಾ ಸರ್ವ ಸದಸ್ಯರುಗಳು ಹಾಗೂ ಶಿಕ್ಷಕರು ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಮತ್ತು ಪಂಚಾಯಿತಿ ಸಿಬ್ಬಂದಿ ವರ್ಗದವರು ಈ ಸಭೆಯಲ್ಲಿ ಇದ್ದರು..
ವರದಿ. ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
