ಧರಣಿ ಸತ್ಯಾಗ್ರಹ ಬೆಂಬಲಿಸಿ ಶ್ರೀಗಳ ಆಶೀರ್ವಾದ ಪಡೆದ ಕೂಡ್ಲಿಗಿ ಬಂಗಾರು ಹನುಮಂತು…!!!

ಧರಣಿ ಸತ್ಯಾಗ್ರಹ ಬೆಂಬಲಿಸಿ ಶ್ರೀಗಳ ಆಶೀರ್ವಾದ ಪಡೆದ ಕೂಡ್ಲಿಗಿ ಬಂಗಾರು ಹನುಮಂತು
ಕೂಡ್ಲಿಗಿ:- ಪರಿಶಿಷ್ಟವರ್ಗದ ಮುಖ್ಯ ಉದ್ದೇಶವಾಗಿರುವ ಮೀಸಲಾತಿ ಹೆಚ್ಚಳಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸುತ್ತಿರುವ ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಂದ ಪುರಿ ಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಸ್ಸಿ ಎಸ್ಟಿ ಮೀಸಲಾತಿಗಾಗಿ 193ನೇ ದಿನದ ಆಹೋರಾತ್ರಿ ಧರಣಿ ಸತ್ಯಾಗ್ರಹದ ಸ್ಥಳಕ್ಕೆವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಮಾಜದ ಮುಖಂಡ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು, ಇವರು ಭೇಟಿ ನೀಡಿ ಧರಣಿ ಸತ್ಯಾಗ್ರಹ ಬೆಂಬಲಿಸಿ ಶ್ರೀಗಳ ಆಶೀರ್ವಾದ ಪಡೆದು ಮಾತನಾಡಿದರು. ಪೂಜ್ಯರು ವಾಲ್ಮೀಕಿ ಸಮುದಾಯದ ಪೀಳಿಗೆಯ ಹಾಗೂ ಶೈಕ್ಷಣಿಕವಾಗಿ ಮಕ್ಕಳ ವಿದ್ಯಾಭ್ಯಾಸದ ಮುಂದಿನ ದಿನಮಾನಗಳಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರಕ್ಕೆ ಆಗ್ರಹಿಸುತ್ತಿರುವ ಬೇಡಿಕೆ ನ್ಯಾಯಯುತವಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಈ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸನ್ಮಾನ್ಯ ಶ್ರೀ ಪ್ರಹ್ಲಾದ್ ಜೋಶಿ ಕೇಂದ್ರ ಸಚಿವರು ಸುರಿಯುತ್ತಿರುವ ಮಳೆಯಲ್ಲಿಯೇ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ಹೋಗಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಪೂಜ್ಯರ ಆಶೀರ್ವಾದವನ್ನು ಪಡೆದು ಮಾತನಾಡಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿ ಧರಣಿ ನಡೆಸುತ್ತಿರುವ ಸ್ವಾಮೀಜಿಯವರ ಆರೋಗ್ಯವನ್ನು ವಿಚಾರಿಸಿದರು.
ಶ್ರೀಯುತರಿಗೆ ಶ್ರೀಮಠದಿಂದ ಹಾಗೂ ವಿಜಯನಗರ ಜಿಲ್ಲೆಯ ವಾಲ್ಮೀಕಿ ಸಮಾಜದ ಮುಖಂಡರು ಅಭಿನಂದನೆಗಳನ್ನು ತಿಳಿಸಿದ್ದಾರೆ…

ವರದಿ.ಬಸಪ್ಪ, ಬಣವಿಕಲ್ಲು (ಅಂಗಡಿ )

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend