ಬಳ್ಳಾರಿಯ ಮುಖ್ಯ ವೃತ್ತದಲ್ಲಿ ಗಡಿಯಾರ ಸ್ಥಂಭ ನಿರ್ಮಾಣಕ್ಕೆ ಚರ್ಚೆ…!!!

ಬಳ್ಳಾರಿಯ ಮುಖ್ಯ ವೃತ್ತದಲ್ಲಿ ಗಡಿಯಾರ ಸ್ಥಂಭ ನಿರ್ಮಾಣಕ್ಕೆ ಚರ್ಚೆ.

140 ಅಡಿ ಎತ್ತರದ ಗಡಿಯಾರ ಸ್ಥಂಭ
ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ನಿರ್ವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು
: ಬಳ್ಳಾರಿ ನಗರದ ಮಧ್ಯಭಾಗವಾದ ಗಡಗಿ ಚೆನ್ನಪ್ಪ ವೃತ್ತದಲ್ಲಿ 07 ಕೋಟಿ ರೂ.ವೆಚ್ಚದಲ್ಲಿ 140 ಅಡಿ ಎತ್ತರದ ನೂತನ ಗಡಿಯಾರ ಸ್ಥಂಭ(ಕ್ಲಾಕ್ ಟವರ್) ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರದಂದು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ 140 ಅಡಿ ಎತ್ತರದ ಗಡಿಯಾರ ಸ್ಥಂಭದ ಕಾಮಗಾರಿಯು ಸಾರ್ವಜನಿಕರಿಗೆ ಹಾಗೂ ಬೀದಿಬದಿ ವ್ಯಾಪಾರಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿಗದಿಪಡಿಸಿದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಬುಡಾ ಅಧ್ಯಕ್ಷರಾದ ಪಿ.ಪಾಲಣ್ಣ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಎಡಿಸಿ ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ವಿರೇಶ್. ಎಚ್. ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend