;

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಯಿಟಿ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ…!!!

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಯಿಟಿ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ.

ಸಿಂಧನೂರು : . ನಗರದ ಪ್ರವಾಸಿ ಮಂದಿರದಿಂದ ತಹಸೀಲ್ದಾರ ಕಛೇರಿಯವರೆಗೆ ಪ್ರತಿಭಟನೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪೆಡರೇಷನ್ (ಎಐಟಿಯುಸಿ) ತಾಲೂಕು ಸಮಿತಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಯಿಟಿ ಸೌಲಭ್ಯಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸಬೇಕು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ತಹಸೀಲ್ದಾರ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಯೋಜನೆಯ ಯಶಸ್ವಿಗಾಗಿ ಹಗಲಿರುಳೂ ಗೌರವಧನದ ಹೆಸರಿನಲ್ಲಿ ದುಡಿಯುತ್ತಿದ್ದಾರೆ. ಇವರುಗಳು 46 ವರ್ಷಗಳಿಂದ ಕೆಲಸಕ್ಕೆ ಭದ್ರತೆಯಿಲ್ಲದೆ, ಕನಿಷ್ಠ ವೇತನವಿಲ್ಲದೆ, ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಂಚಣಿ, ಭವಿಷ್ಯನಿಧಿ, ಗ್ರಾಚ್ಯುಟಿ, ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಬೇಡಿಕೆಗಳ ಈಡೇರಿಕೆಗಾಗಿ ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೂರಾರು ಪ್ರತಿಭಟನೆಗಳು ಮುಷ್ಕರ ನಡೆಸಿದರೂ ಆಳುವ ಸರ್ಕಾರಗಳೂ ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸದಿರುವುದು ವಿಷಾಧನಿಯ ಆದರಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿರೋಧಿ ನಿಲುವು ತಾಳಿವೆ.

ಎಲ್.ಕೆ.ಜಿ,ಯು.ಕೆ.ಜಿ ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸುವ ಬಗ್ಗೆ ರಾಜ್ಯದಲ್ಲಿ 65911 ಅಂಗನವಾಡಿ ಕೇಂದ್ರಗಳಿದ್ದು 1.28ಲಕ್ಷ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ.ಆದರೆ ರಾಜ್ಯಸರ್ಕಾರದ ಆದೇಶದಂತೆ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳನ್ನು ಸರ್ಕಾರಿ ಶಾಲೆಗಳಲ್ಲಿ ಆರಂಭಿಸುವ ಪ್ರಕ್ರಿಯೆ ಆರಂಭವಾಗಿದೆ. ಸರ್ಕಾರಿ ಪಬ್ಲಿಕ್ ಶಾಲೆಗಳಿಗೆ ಹೋಗುವ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳ ವಯೋಮಾನ ಒಂದೇ ಆಗಿರುವುದರಿಂದ (3ರಿಂದ 6ವರ್ಷ) ಅಂಗನವಾಡಿಗಳಲ್ಲಿ ಫಲಾನುಭವಿಗಳ ಸಂಖ್ಯೆ ಕ್ರಮೇಣ ಕಮ್ಮಿಯಾಗಿ ಮುಂದಿನ ದಿನಗಳಲ್ಲಿ ಮುಚ್ಚುವ ಭೀತಿ ಕಾಡುತ್ತಿದೆ. ಅದರಲ್ಲೂ ನೂತನ ಶಿಕ್ಷಣ ನೀತಿಯು ಐಸಿಡಿಎಸ್‌ ಯೋಜನೆಗೆ ಇತಿಶ್ರೀ ಹೇಳಲು ನಾಂದಿಯಾಗುತ್ತದೆ. ಹಾಗೂ ಖಾಸಗೀಕರಣಕ್ಕೆ ಮುನ್ನುಡಿ ಬರೆಯಲಾಗುತ್ತಿದೆ ಎಂದು ಜಿಲ್ಲಾ ಗೌರವಾಧ್ಯಕ್ಷ ಡಿ.ಎಚ್.ಕಂಬಳಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪೆಡೆರೇಷನ ಮುಖಂಡರಾದ ನಾಗರತ್ನ, ಆದಿಲಕ್ಷ್ಮಿ, ಗಿರಿಜಮ್ಮ, ಸುಲೋಚನಾ, ಕೆ.ಲಕ್ಷ್ಮೀ, ಸಾವಿತ್ರಿ, ಕವಿತಾ, ಯಮನಮ್ಮ, ಜ್ಯೋತಿ, ಶೋಭಾ, ಸುಧಾ, ತಿಪ್ಪಯ್ಯ ಶೆಟ್ಟಿ, ಸೇರಿದಂತೆ ನೂರಾರು ಜನ ಪ್ರತಿ ಭಟನೆಯಲ್ಲಿ ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;