ಶಿಕ್ಷಕರ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ
ಕೂಡ್ಲಿಗಿ:- ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಪ್ಟಂಬರ್ 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ ಜರುಗಿತು.
ತಹಸೀಲ್ದಾರರಾದ ಟಿ ಜಗದೀಶ್ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿ ವೈ ರವಿಕುಮಾರ್ ಇವರ ನೇತೃತ್ವದಲ್ಲಿ ಸಭೆ ಜರಗಿದ್ದು ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು.
ಪಟ್ಟಣದ ಚಂದ್ರಶೇಖರ್ ಅಜಾದ್ ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಲಾಗುವುದೆಂದು ತಿರ್ಮಾನಿಸಲಾಯಿತು. ಈ ಆಚರಣೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಗುವುದು ಎಂದು ಸಭೆಯಲ್ಲಿ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಶಿಕ್ಷಣಾಧಿಕಾರಿ ಯುವರಾಜ್ ನಾಯ್ಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ ಶಿವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೊಟ್ರಗೌಡ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದರಾದ್ಯ, ಆಂಜನಯ್ಯ ಕ್ಷೇತ್ರ ಸಮನ್ವಯಾಧಿಕಾರಿ ಜಗದೀಶ್. ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪ್ರಾ. ಶಾ. ಶಿ. ಸಂಘ ಜಿಲ್ಲಾ ಕಾರ್ಯದರ್ಶಿ ಶಿವನಂದ, ಸಾವಿತ್ರಿಬಾಯಿ ಪುಲೆ ಸಂಘದ ತಾಲೂಕು ಅಧ್ಯಕ್ಷರಾದ ಶ್ರೀಮತಿ ಬಿಹೆಚ್ ವಸಂತಮ್ಮ, ಕರ್ನಾಟಕ ಮುಸ್ಲಿಂ ನೌಕರರ ಸಂಘದ ಅಧ್ಯಕ್ಷರಾದ ಶ್ರೀಮತಿ ಜೀನಾಬಿ, ಆರ್ ಪಿ ತಳವಾರ ಶರಣಪ್ಪ . ಸಿಆರ್ಪಿ ಜಿಟಿ ಸಿದ್ದೇಶ್ವರ, ಎನ್ ಪಿ ಎಸ್ ನೌಕರ ಸಂಘದ ಅಧ್ಯಕ್ಷರಾದ ಮಂಜುನಾಥ್. ಸೇರಿದಂತೆ ತಾಲೂಕ ಮಟ್ಟದ ಶಿಕ್ಷಕರು ಶಿಕ್ಷಣ ಇಲಾಖೆ ಅಧಿಕಾರಿಗಳು ಪತ್ರಿಕೆ ಮಿತ್ರರು ಉಪಸ್ಥಿತರಿದ್ದರು..

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
